Saturday, October 10, 2026
Saturday, October 10, 2026

K. S. Eshwarappa ಸ್ಪರ್ಧೆಯಿಂದ ಹಿಂದೆ ಸರಿಯಲ್ಲ- ಕೆ.ಎಸ್.ಈಶ್ವರಪ್ಪ

Date:

K. S. Eshwarappa ನಾನು ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನನ್ನ ಸ್ಪರ್ಧೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ ಎಂದು ಕೆ.ಎಸ್.ಈಶ್ವರಪ್ಪ ಮತ್ತೆ ಪುನರುಚ್ಚರಿಸಿದ್ದಾರೆ. ತಮ್ಮ ಸ್ವಗೃಹದ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಠ ಮಂದಿರಗಳು, ಸರ್ವ ಜಾತಿಯ ಬಾಂಧವರು ಒಳ್ಳೆಯ ಬೆಂಬಲ ನೀಡುವುದಾಗಿ ಭರವಸೆ ನೀಡುತ್ತಿದ್ದಾರೆ ಎಂದರು.

ಬಿಜೆಪಿ ನನ್ನ ತಾಯಿ ಇದ್ದಂತೆ. ನಾನೆಂದೂ ಅದರಿಂದ ದೂರವಾಗಿಲ್ಲ. ಕೆಲವರ ಷಡ್ಯಂತ್ರ ನಡೆದಿದೆ. ನನ್ನ ತಾಯಿಯಿಂದ ದೂರ ಮಾಡುವ ಪ್ರಯತ್ನ ಫಲಿಸಲ್ಲ ಎಂದರು.

ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ. ಇದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನವರದೂ ಬೆಂಬಲ ಸಿಗುತ್ತಿದೆ. ಹಲವು ನಾಯಕರು ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

K. S. Eshwarappa ಹಿಂದೂ ಪರ ಇರುವ ನಾಯಕರನ್ನು ದಮನ ಮಾಡಲಾಗುತ್ತಿದೆ. ಪಕ್ಷನಿಷ್ಠೆಯ ಕಾರಣಕ್ಕಾಗಿ ಸ್ಪರ್ಧಿಸುತ್ತಿದ್ದೇನೆ. ನನಗಾದ ಅನ್ಯಾಯ ಸರಿಪಡಿಸಿಕೊಳ್ಳಬೇಕಿದೆ. ಈ ಚುನಾವಣೆಯಲ್ಲಿ ಶೇ. 100ರಷ್ಟು ಗೆಲುವು ನನ್ನದೇ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...