Lok sabha Election ತಾವು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾಗ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ ಅಧಿಕಾರದ ಕುತ್ತಿಗೆ ಹಿಸುಕಿದ್ದ ಕೆ.ಎಸ್.ಈಶ್ವರಪ್ಪ ಲೋಕಸಭೆ ಪ್ರವೇಶ ಮಾಡಿ ಇನ್ನಷ್ಟು ವ್ಯವಸ್ಥೆ ಹಾಳು ಮಾಡಲು ಸಜ್ಜಾಗಿದ್ದಾರೆ. ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಟ 25ಸಾವಿರ ಮತ ಪಡೆದರೆ ನಾನು ಅವರನ್ನು ಒಬ್ಬ ನಾಯಕ ಎಂದು ಒಪ್ಪಿಕೊಳ್ಳುತ್ತೇನೆ ಎಂದು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ತಿಳಿಸಿದ್ದಾರೆ.
ಸಾಗರದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ಸಚಿವರಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನೇ ಹಾಳು ಮಾಡಿರುವ ಕೆ.ಎಸ್.ಈಶ್ವರಪ್ಪ ಚುನಾವಣೆಗೆ ಸ್ಪರ್ಧೆ ಮಾಡಿದರೆ ಜನರೆ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದರು.
ಗ್ರಾಮ ಪಂಚಾಯ್ತಿ ಶಾಸನಬದ್ದ ಅನುದಾನಕ್ಕೆ ಸಚಿವರಾಗಿ ಕೊಡಲಿಪೆಟ್ಟು ಕೊಟ್ಟವರು ಈಶ್ವರಪ್ಪ. ರಾಜ್ಯಮಟ್ಟದಲ್ಲಿ ಸೋಲಾರ್ ಟೆಂಡರ್ ಕರೆದು ಪ್ರತಿ ಗ್ರಾಮ ಪಂಚಾಯ್ತಿಯಿಂದ 1.25 ಲಕ್ಷ ರೂ. ವಸೂಲಿ ಮಾಡಿದ್ದಾರೆ. ರಾಜ್ಯದ 6300 ಗ್ರಾಮ ಪಂಚಾಯ್ತಿಯಿಂದ ತಲಾ ಲಕ್ಷ ರೂ.ನಂತೆ ಹಣ ವಸೂಲಿ ಮಾಡಲಾಗಿದೆ. ಈಗಾಗಲೆ ಅಳವಡಿಸಿದ್ದ ಸೋಲಾರ್ ಪೂರ್ಣ ಹಾಳಾಗಿದೆ. ಗ್ರಾಮ ಪಂಚಾಯ್ತಿಗೆ ಕಸ ವಿಲೇವಾರಿ
ಆಟೋ ಟಿಪ್ಪರ್ ಸಹ ಅವರೇ ಸರಬರಾಜು ಮಾಡಿದ್ದಾರೆ.
Lok sabha Election ಇದರಲ್ಲಿಯೂ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು ಆಟೋ ಟಿಪ್ಪರ್‌ಗಳು ಕಳಪೆ ಗುಣಮಟ್ಟದಿಂದ ಕೂಡಿದೆ. ಇದು ಕೆ.ಎಸ್.ಈಶ್ವರಪ್ಪ ಅವರ ಸಚಿವ ಸ್ಥಾನದ ಸಾಕ್ಷಿಗಳಾಗಿವೆ ಎಂದರು.