Thursday, June 18, 2026
Thursday, June 18, 2026

Droupadi Murmu ರಾಜ್ಯದ ನಾಲ್ಕು ಮಸೂದೆ ತಡೆ ಹಿಡಿದರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸುಪ್ರೀಂ ನಲ್ಲಿ ಮನವಿ ಸಲ್ಲಿಸಿದ ಕೇರಳ ಸರ್ಕಾರ

Date:

Droupadi Murmu ತಿರುವನಂತಪುರಂ: ಕೇರಳ ಸರ್ಕಾರವು ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ಒಪ್ಪಿಗೆಯನ್ನು ನೀಡಲು ಯಾವುದೇ ಕಾರಣವನ್ನು ನೀಡದೆ ತಡೆ ಹಿಡಿದಿದ್ದಕ್ಕಾಗಿ ಕೇರಳ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸುಪ್ರೀಂಕೋರ್ಟ್‌ ಕದ ತಟ್ಟಿದೆ.
ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದ ಮಸೂದೆಗಳಿಗೆ ಅಂಕಿತ ನೀಡದೆ ಅನಿರ್ದಿಷ್ಟ ವಿಳಂಬ ಉಂಟು ಮಾಡಿ ನಂತರ ಅವುಗಳನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರ ವಿರುದ್ಧವೂ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಕದ ತಟ್ಟಿತ್ತು.
ಯಾವುದೇ ಕಾರಣ ನೀಡದೆ ನಾಲ್ಕು ವಿಧೇಯಕಗಳಿಗೆ ಒಪ್ಪಿಗೆಯನ್ನು ತಡೆಹಿಡಿಯುವ ರಾಷ್ಟ್ರಪತಿಗಳ ಕಾರ್ಯವು ಅತ್ಯಂತ ನಿರಂಕುಶವಾಗಿದೆ. ನಾಲ್ಕು ಮಸೂದೆಗಳಿಗೆ ಯಾವುದೇ ಕಾರಣ ನೀಡದೆ ಅಂಗೀಕಾರ ತಡೆಹಿಡಿದಿರುವುದು ಸಂವಿಧಾನದ ವಿಧಿ 14, 200 ಮತ್ತು 201ರ ಉಲ್ಲಂಘನೆಯಾಗಿದೆ. ಒಟ್ಟು 7 ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಅಂಕಿತ ಹಾಕಲು ಕಳುಹಿಸಿಕೊಡಲಾಗಿತ್ತು. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ರಾಷ್ಟ್ರಪತಿಗಳ ಕಾರ್ಯದರ್ಶಿ, ಕೇರಳ ರಾಜ್ಯಪಾಲ, ರಾಜ್ಯಪಾಲರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಕೇರಳ ಸರ್ಕಾರ ಪರವಾಗಿ ಹಿರಿಯ ವಕೀಲ ಸಿ ಕೆ ಶಶಿ ಸುಪ್ರೀಂ ಕೋರ್ಟಿನಲ್ಲಿ Droupadi Murmu ವಾದ ಮಂಡಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...