Thursday, March 19, 2026
Thursday, March 19, 2026

Chhatrapati Shivaji Jayanti ಛತ್ರಪತಿ ಶಿವಾಜಿ ಜಯಂತಿ ಬೃಹತ್ ಹಿಂದೂ ಸಾಮ್ರಾಜ್ಯೋತ್ಸವ

Date:

Chhatrapati Shivaji Jayanti ಪ್ರತಿ ವರ್ಷದಂತೆ ಈ ಬಾರಿಯೂ ೩೯೪ ನೇ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ವವದ ಅಂಗವಾಗಿ ಮಾರ್ಚ್ ೨೮ ರಂದು ಸಂಜೆ ೫ ಕ್ಕೆ ಗಾಂಧಿ ಮೈದಾನದಲ್ಲಿ ಬೃಹತ್ ಹಿಂದೂ ಸಾಮ್ರಾಜ್ಯೋತ್ಸವವನ್ನು ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಅಂದು ಮಧ್ಯಾಹ್ನ ೨-೩೦ ರಿಂದ ಗಣಪತಿ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಭ್ರಮದ ಶೋಭಾಯಾತ್ರೆ ನಡೆಯಲಿದೆ. ಮಾತೆಯರು, ಹೆಣ್ಣು ಮಕ್ಕಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಭೇದ ಮರೆತು ಭಾಗವಹಿಸಬೇಕು ಎಂದರು.
Chhatrapati Shivaji Jayanti ಛತ್ರಪತಿ ಶಿವಾಜಿ ಸಮಾಜಕ್ಕೆ ಮಾಡಿರುವ ಸಾಧನೆಗಳನ್ನು ನಾವು ತಿಳಿದುಕೊಳ್ಳಬೇಕು. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಶೋಭಾಯಾತ್ರೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಾನಿಧ್ಯ ವಹಿಸುವರು. ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ್ಯ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ದಿಕ್ಸೂಚಿ ಭಾಷಣ ಮಾಡುವರು. ಪರಿಷತ್ತಿನ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ಅಧ್ಯಕ್ಷತೆ ವಹಿಸುವರು. ಭಜರಂಗದಳದ ಜಿಲ್ಲಾ ಸಂಯೋಜಕ್ ಸಂತೋಷ್ ಶಿವಾಜಿ ಉಪಸ್ಥಿತರಿರುವರು ಎಂದರು.
ಸಂಘಟನೆಯ ದಿನೇಶ ಗೌಡ, ಸುನೀಲ್, ರುದ್ರಪ್ಪ, ಶ್ವೇತಾ, ಪುಪ್ಪಾ ಪೈ, ಸೋಮಶೇಖರ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...