Wednesday, July 8, 2026
Wednesday, July 8, 2026

B.Y.Raghavendra ಹತ್ತಿದ ಏಣಿ ಒದೆಯುವ ಕೆಲಸ: ಈಶ್ವರಪ್ಪ ಹೆಸರೇಳದೆ ಬಿವೈಆರ್ ಟೀಕೆ

Date:

B.Y.Raghavendra ಹತ್ತಿದ ಏಣಿಯನ್ನು ಒದೆಯುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಯಾರ ಹೆಸರು ಹೇಳದೆ ಬಿಜೆಪಿ ಸಂಸದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೆ.ಎಸ್.ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಘೋಷಿಸಿ ಎರಡು ವಾರಗಳೇ ಆಗಿವೆ. ರಾಷ್ಟ್ರದ ಮತ್ತು ರಾಜ್ಯದ ನಾಯಕರು ಅವರ ನಡೆಯನ್ನು ನೋಡುತ್ತ ಇದ್ದಾರೆ. ಖಂಡಿತ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ರಾಜಕೀಯ ಅನೇಕ ಮುಖಂಡರು ಹತ್ತಿದ ಏಣಿಯನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.
ಈಶ್ವರಪ್ಪನವರು ಬಿ.ಎಸ್.ಯಡಿಯೂರಪ್ಪನವರೇ ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಡಮ್ಮಿ ಅಭ್ಯರ್ಥಿಯನ್ನು ಹಾಕಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಗೆ ಆ ಗತಿ ಇನ್ನೂ ಬಂದಿಲ್ಲ. ರಾಷ್ಟ್ರದ ಯಾವ ಮೂಲೆಯಲ್ಲೂ ನಾವು ಡಮ್ಮಿ ಅಭ್ಯರ್ಥಿಯನ್ನು ಹಾಕಿಸುವಂತಹ ಕೆಲಸ ಮಾಡುವುದಿಲ್ಲ. ಹೊಂದಾಣಿಕೆ ರಾಜಕೀಯ ಬಿಜೆಪಿಗೆ ಅಗತ್ಯ ಇಲ್ಲ ಎಂದರು.
B.Y.Raghavendra ನಟ ಶಿವರಾಜ್‍ಕುಮಾರ್ ಹೋದೆಡೆಯಲ್ಲ ಭರ್ಜರಿ ಜನರು ಸೇರುತ್ತಾರೆ ಎಂಬ ಪ್ರಶ್ನೆಗೂ ಉತ್ತರಿಸಿದ ಅವರು ಯಾವುದೇ ಒಬ್ಬ ಸಿನಿಮಾ ನಟನನ್ನು ಜನರು, ಯುವಕರು ನೋಡಲು ಸೇರುವುದು ಸಹಜವಾದುದು. ಈ ರಾಜ್ಯದಲ್ಲಿ ಬೇಕಾದಷ್ಟು ಈ ರೀತಿಯ ಉದಾಹರಣೆಗಳು ಇವೆ. ಆದರೆ, ಅವೆಲ್ಲವೂ ಮತಗಳಾಗಿ ಪರಿವರ್ತನೆಯಾಗಲ್ಲ. ನಟನನ್ನು ನೋಡುವುದು ಅಪೇಕ್ಷೆ ಮಾತ್ರ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...