Nirmala Sitharaman ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಅವಕಾಶ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ಹೇಳಿದ್ದಾರೆ.
ಒಂದು ವಾರ ಅಥವಾ ಹತ್ತು ದಿನಗಳ ಕಾಲ ಯೋಚಿಸಿದ ನಂತರ ಈ ನಿರ್ಧಾರ ತಿಳಿಸಿದ್ದೇನೆ. ಸ್ಪರ್ಧಿಸಲು ನನ್ನ ಬಳಿ ಅಷ್ಟು ಹಣವಿಲ್ಲ.
ಬಿಜೆಪಿ ಅಧ್ಯಕ್ಷರು ನನ್ನ ನಿಲುವನ್ನು ಒಪ್ಪಿಕೊಂಡಿದ್ದಾರೆ ಅವರಿಗೆ ನಾನು ಕೃತಜ್ಞಳಾಗಿದ್ದೇನೆ. ಹಾಗಾಗಿ ನಾನು ಸ್ಪರ್ಧಿಸುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ದೇಶದ ಹಣಕಾಸು ಸಚಿವರ ಬಳಿ ಚುನಾವಣೆಯಲ್ಲಿ ಹೋರಾಡಲು ಏಕೆ ಸಾಕಷ್ಟು ಹಣವಿಲ್ಲ ಎಂಬ ಪ್ರಶ್ನೆ ಕೇಳಿಬಂದಾಗ, ಭಾರತದ ಕನ್ಸಾಲಿಡೇಟೆಡ್ ಫಂಡ್ ತನಗೆ ಸೇರಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ
ನನ್ನ ಸಂಬಳ, ನನ್ನ ಗಳಿಕೆ ಮತ್ತು ನನ್ನ ಉಳಿತಾಯ ನನ್ನದೇ ಹೊರತು ಭಾರತದ ಕನ್ಸಾಲಿಡೇಟೆಡ್ ಫಂಡ್ ಅಲ್ಲ. ನಾನು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇನೆ.
Nirmala Sitharaman ಏಪ್ರಿಲ್ 19 ರಿಂದ ಪ್ರಾರಂಭವಾಗುವ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ರಾಜ್ಯಸಭಾ ಸದಸ್ಯರನ್ನು ಕಣಕ್ಕಿಳಿಸಿದೆ. ಇವರಲ್ಲಿ ಪಿಯೂಷ್ ಗೋಯಲ್, ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಮನ್ಸುಖ್ ಮಾಂಡವಿಯಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದ್ದಾರೆ. ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ.