Sunday, August 2, 2026
Sunday, August 2, 2026

Assembly Election  ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ಗಾಗಿ ಎಸ್.ಪಿ.ದಿನೇಶ್ ಮನವಿ

Date:

Assembly Election ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಆಯನೂರು ಮಂಜುನಾಥ್ ಅಭ್ಯರ್ಥಿ ಎಂದು ಘೋಷಿಸಿರುವುದನ್ನು ತಡೆಹಿಡಿಯಬೇಕೆಂದು ಇನ್ನಿಬ್ಬರು ಟಿಕೆಟ್ ಆಕಾಂಕ್ಷಿಗಳಾದ ಎಸ್ ಪಿ ದಿನೇಶ್ ಮತ್ತು ರಂಗಸ್ವಾಮಿ ಗೌಡ ಎಐಸಿಸಿ ಅಧ್ಯಕ್ಷರನ್ನು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು , ವಿಧಾನ ಪರಿಷತ್ ಚುನಾವಣೆಗೆ
ಪಕ್ಷದ ಫಲಿತಾಂಶದ ದೃಷ್ಠಿಯಿಂದ ಘೋಷಣೆಯಾಗಿರುವ ಆಯನೂರು ಅವರ ಹೆಸರು ತಡೆಹಿಡಿಯಬೇಕು. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಮತ್ತೊಮ್ಮೆ ಸರ್ವೆ ಮಾಡಿಸಿ, ಪಕ್ಷದ ಮುಖಂಡರುಗಳ, ಬ್ಲಾಕ್ ಅಧ್ಯಕ್ಷರುಗಳ, ಜಿಲ್ಲಾ ಅಧ್ಯಕ್ಷರುಗಳ, ಶಾಸಕರುಗಳ ಅಭಿಪ್ರಾಯ ಪಡೆದು ತನಗೆ ಟಿಕೆಟ್ ಘೋಷಿಸಬೇಕೆಂದು ಕೋರಿದರು.
ಕೆಪಿಸಿಸಿ ಅಧ್ಯಕ್ಷರ ನಿರ್ದೇಶಾನುಸಾರ ನಾನು ಪದವೀಧರರ ನೋಂದಣಿ ಪ್ರಕ್ರಿಯೆ ಕೈಗೊಂಡು ಮತದಾರರನ್ನು ಸಂಭಾವ್ಯ ಅಭ್ಯರ್ಥಿ ಎಂದು ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದೆ. ನನಗೆ ಟಿಕೆಟ್ ನಿರಾಕರಿಸಿದಲ್ಲಿ ನಾನು ಮತದಾರರನ್ನು ಗೊಂದಲಕ್ಕಿಡು ಮಾಡಿದಂತಾಗುವುದು. ಯುವ ಕಾಂಗ್ರಸ್‌ನಿಂದ ಪಕಗಷದ ಕೆಲಸ ಮಾಡಿದ್ದೇನೆ. ಎನ್.ಎಸ್.ಯು.ಐ 33 ವರ್ಷಗಳ ಅವಧಿಯಲ್ಲಿ ನನ್ನ ಪಕ್ಷ ನಿಷ್ಠೆ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಟ್ಟಡ ನಿರ್ಮಾಣ ಜವಾಬ್ದಾರಿ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ ಎಂದು ವಿವರಿಸಿದರು.
Assembly Election   ಆದ್ದರಿಂದ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಘೋಷಣೆಯಾದ ಟಿಕೆಟ್‌ನ್ನು ಮರು ಪರಿಶೀಲನೆ ಮಾಡಿ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...