Shivamogga DC ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‌ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದರು.
ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ ಖಾಸಗಿ ರೈತರ ಜಮೀನುಗಳಲ್ಲಿ ಕೊಳವೆ ಬಾವಿಗಳ ಕೊರೆಯುವ ಕುರಿತು ಜಿಲ್ಲೆಯ ರಿಗ್ ವಾಹನ ಮಾಲೀಕರು ಹಾಗೂ ಏಜೆನ್ಸಿಯವರೊಂದಿಗೆ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಾ.೨೬ ರಂದು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ವಿವಿಧ ಇಲಾಖೆಗಳಡಿ ವಿಶೇಷವಾಗಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯಡಿ ವಿವಿಧ ಯೊಜನೆಗಳಡಿಯಲ್ಲಿ ಕೊರೆಯುವ ಕೊಳವೆ ಬಾವಿಗಳ ಕಾಮಗಾರಿಗಳನ್ನು ಅನು??ಟನಗೊಳಿಸಲು ರಿಗ್/ಕೊಳವೆಬಾವಿ ಮಾಲೀಕರು ಕರಾರು ಮಾಡಿಕೊಂಡಿದ್ದು, ಸೂಕ್ತ ಸಮಯದಲ್ಲಿ ಡ್ರಿಲ್ಲಿಂಗ್ ಗಳನ್ನು ಮಾಡದೇ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.
ಪ್ರಸಕ್ತ ಸಾಲಿನಲ್ಲಿ ಬರ ಪರಿಸ್ಥಿತಿ ಇರುವುದರಿಂದ ಬೇಸಿಗೆ ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವುದು ಅತ್ಯಂತ ಆದ್ಯತೆಯ ಹಾಗೂ ತುರ್ತು ಕೆಲಸವಾಗಿರುವ ಹಿನ್ನೆಲೆಯಲ್ಲಿ ಬಾಕಿ ಇರುವ ಎಲ್ಲಾ ಕೊಳವೆ ಬಾವಿಗಳನ್ನು ಇನ್ನೆರಡು ದಿನಗಳಲ್ಲಿ ಕೊರೆದು ಪೂರ್ಣಗೊಳಿಸಬೇಕು. ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯತನ ತೋರಿದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ ಹಾಗೂ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಳ್ಳಲಾಗುವುದೆಂದು ಸೂಚಿಸಿದರು.
ಇದಲ್ಲದೇ, ಪ್ರಸಕ್ತ ಸಾಲಿನಲ್ಲಿ ಬರಗಾಲ ಇರುವುದರಿಂದ ರೈತರಿಗೆ ಮಾನವೀಯತೆ ದೃಷಿಯಿಂದ ಅನುಮೋದಿತ ದರ ಪಟ್ಟಿಗಳನ್ವಯ ಕೊಳವೆ ಬಾವಿಗಳನ್ನು ಕೊರೆಯಬೇಕು. ರೈತರಿಂದ ಹೆಚ್ಚಿನ ದರ ಪಡೆದಿರುವ ಕುರಿತು ಹಲವು ದೂರುಗಳು ಬಂದಿದ್ದು, ಪುನಃ ಹೆಚ್ಚಿನ ದರಗಳನ್ನು ರೈತರಿಂದ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ರಿಗ್ ಮಾಲೀಕರು/ಏಜೆನ್ಸಿಗಳ ವಿರುದ್ಧ ನಿರ್ದಾಕ್ಷಣ್ಯವಾಗಿ Shivamogga DC ಕ್ರಮ ವಹಿಸಲಾಗುವುದು. ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನಿಯಮಾನುಸಾರ ರಿಗ್ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುದು ಎಂದರು.
Shivamogga DC ಕೊಳವೆ ಬಾವಿ ಕೊರೆಯಲು ರೈತರಿಂದ ದುಪ್ಪಟ್ಟು ಹಣ ಪಡೆದರೆ ಬೋರ್ ವೆಲ್ ಲಾರಿ ಮಾಲೀಕರ ವಿರುದ್ಧ ಕ್ರಮ- ಗುರುದತ್ತ ಹೆಗ್ಗಡೆ
Date: