Thursday, June 18, 2026
Thursday, June 18, 2026

Kuvempu University ಹೊಸ ಯೋಜನೆಗಳ ಬದಲು ಪ್ರಸ್ತುತ ಜಾರಿಯಲ್ಲಿನ ಯೋಜನೆ ಪೂರೈಸಲು ಕ್ರಮ- ಜಿ.ಬಂಗಾರಪ್ಪ

Date:

Kuvempu University ಕುವೆಂಪು ವಿಶ್ವವಿದ್ಯಾಲಯವ 2024-25 ನೇ ಸಾಲಿಗೆ 137.7 ಕೋಟಿ ರೂಗಳ ಬಜೆಟ್ ಮಂಡನೆ ಮಾಡಿದೆ.

ಕುವೆಂಪು ವಿವಿಯಲ್ಲಿ ಇತ್ತೀಚಿಗೆ ನಡೆದ ವಿದ್ಯಾ ವಿಷಯಕ ಪರಿಷತ್ನ ಸಭೆಯಲ್ಲಿ 2024, 25 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗಿತ್ತು 1.85 ಕೋಟಿ ರೂಗಳ ಕೊರತೆ ಬಜೆಟನ್ನು ಸಿದ್ಧಪಡಿಸಲಾಗಿದೆ.

ಹೊಸ ಯೋಜನೆಗಳ ಬದಲು ಪ್ರಸ್ತುತ ಜಾರಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹಣಕಾಸು ಅಧಿಕಾರಿ ಜಿ ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಕುವೆಂಪು ಬಿವಿಯು ವಿವಿಧ ಮೂಲಗಳಿಂದ 135.55 ಕೋಟಿಗಳ ಸ್ವೀಕೃತಿಯನ್ನು ನಿರೀಕ್ಷಿಸುತ್ತಿದೆ ಹಾಗೂ 137.34ಕೋಟಿ ರೂಗಳನ್ನು ವೆಚ್ಚಕ್ಕಾಗಿ ನಿಗದಿಗೊಳಿಸಲಾಗಿದೆ.

ಸ್ವೀಕೃತಿಯನ್ನು ವೇತನ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವೆಚ್ಚಗಳು ಪರೀಕ್ಷಾ ವೆಚ್ಚಗಳು ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಳಸಲು ಉದ್ದೇಶಿಸಲಾಗಿದೆ. ಒಟ್ಟು 185 ಕೋಟಿ ರೂಗಳ ಕೊರತೆ ಬಜೆಟ್ ಸಿದ್ಧಪಡಿಸಲಾಗಿದ್ದು, ಹೆಚ್ಚುವರಿ ಅನುದಾನಕ್ಕಾಗಿ ಸರ್ಕಾರವನ್ನು ಕೋರಲು ತೀರ್ಮಾನಿಸಲಾಗಿದೆ.

ಸಹ್ಯಾದ್ರಿ ಕಾಲೇಜಿನಲ್ಲಿ 22 ತರಗತಿ ಕೊಠಡಿಗಳನ್ನು ಪೂರ್ಣಗೊಳಿಸಲಾಗಿದ್ದು ಶೀಘ್ರವೇ ಪಾಠ ಪ್ರವಚನಕ್ಕೆ ಮುಕ್ತಗೊಳಿಸಲಾಗುವುದು.

ರೂಸ ಯೋಜನೆ ಅಡಿ ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯವನ್ನು ಪೂರ್ಣಗೊಳಿಸಿದ್ದು ಸದ್ಯದಲ್ಲೇ ಬಳಕೆಗೆ ನೀಡಲಾಗುವುದು. ಈ ವರ್ಷ ನ್ಯಾಕ್ ಸಮಿತಿಯ ನಾಲ್ಕನೇ ಆವೃತ್ತಿಯ ಮೌಲ್ಯಮಾಪನ ಇರುವುದರಿಂದ ಬೋಧನೆ ಮತ್ತು ಸಂಶೋಧನೆಗೆ ಹೆಚ್ಚು ಹೊತ್ತು ನೀಡಲು ವಿವಿ ಶ್ರಮಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Kuvempu University ಈ ಸಂದರ್ಭದಲ್ಲಿ ಸಭೆಯಲ್ಲಿ ವಿವಿಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುಲಸಚಿವ ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್ ಎಂ ಗೋಪಿನಾಥ್ ಹಾಗೂ ವಿದ್ಯಾವಿಶಯಕ ಪರಿಷತ್ನ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...