Vote Awareness Bike Jatha ಈ ಬಾರಿಯ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿ ಕುರಿತು ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಏ.2 ರಂದು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 2 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಕ Vote Awareness Bike Jatha ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿರುತ್ತಾರೆ.