Monday, February 2, 2026
Monday, February 2, 2026

Lok Sabha Election 2024 ಇಬ್ಬರ ಜಗಳ ಮೂರನೇಯವರಿಗೆ ಲಾಭ ಕೋಲಾರ ಟಿಕೆಟ್ ಫೈನಲ್

Date:

Lok Sabha Election 2024 ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಕೆ.ವಿ.ಗೌತಮ್ ಅವರಿಗೆ ಟಿಕೆಟ್‌ ನೀಡಿದೆ.

ಈ ಕುರಿತು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಕೋಲಾರ ಜಿಲ್ಲೆಯ ಶಾಸಕರ ನಡುವೆ ಜಟಾಪಟಿ ನಡೆದಿತ್ತು. ಸಚಿವ ಕೆ.ಹೆಚ್‌ ಮುನಿಯಪ್ಪ ಮತ್ತು ಮಾಜಿ ಸಚಿವ ಕೆ.ಆರ್‌ ರಮೇಶ್ ಕುಮಾರ್ ಬಣಗಳ ನಡುವೆ ಕಿತ್ತಾಟ ನಡೆದಿದೆ. ಮುನಿಯಪ್ಪ ಸಂಬಂಧಿಕರಿಗೆ ಟಿಕೆಟ್ ನೀಡುವುದಕ್ಕೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿ ರಾಜೀನಾಮೆ ಬೆದರಿಕೆ ಹಾಕಿದ್ದರು. ಅತ್ತ ಮುನಿಯಪ್ಪ ಬಣ ತಮ್ಮವರಿಗೇ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸಂಧಾನ ಸಭೆಯೂ ನಡೆದಿತ್ತು. ಇದೀಗ ಎಲ್ಲಾ ಗೊಂದಲಗಳಿಗೆ Lok Sabha Election 2024 ತೆರೆಬಿದ್ದಿದ್ದು, ಕೋಲಾರದ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...