Wednesday, September 16, 2026
Wednesday, September 16, 2026

 Gayatri Siddheshwar ಮಹಿಳೆಯರ ಮೇಲೆಸಲ್ಲದ ಟೀಕೆ: ಶಾಮನೂರು ಶಿವಶಂಕರಪ್ಪ ವಿರುದ್ಧ ಗಾಯತ್ರಿ ಸಿದ್ಧೇಶ್ವರ ‘ಗರಂ

Date:

 Gayatri Siddheshwar ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಕೇವಲ ಅಡುಗೆ ಮಾಡಲಷ್ಟೇ ಲಾಯಕ್ಕು’ ಎಂದು ಹೇಳುವ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ವಿವಾದ ಸೃಷ್ಟಿಸಿದ್ದಾರೆ. ಶಿವಶಂಕರಪ್ಪ ಅವರ ಹೇಳಿಕೆಗೆ ವಿವಿಧ ವಲಯಗಳಿಂದ ತೀವ್ರ ಟೀಕೆ ವ್ಯಕ್ತವಾಗಿದೆ.

ಇತ್ತೀಚೆಗಷ್ಟೇ ಜಿಲ್ಲೆಯ ಬಂಟ್ಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ ಅವರು, ಎದುರಾಳಿ ಅಭ್ಯರ್ಥಿಗೆ ಜನರ ಮಧ್ಯೆ ಮಾತನಾಡಲು ಸಹ ಬರುವುದಿಲ್ಲ. ಅವರು ಕೇವಲ ಅಡುಗೆ ಮಾಡಲು ಮಾತ್ರ ಲಾಯಕ್ಕು. ಲೋಕಸಭೆ ಚುನಾವಣೆಯಲ್ಲಿ ಜನಬೆಂಬಲ ಪಡೆಯುವ ಮುನ್ನ ಅವರು ದಾವಣಗೆರೆಯ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲಿ ಎಂದಿದ್ದರು.
ಬಿಜೆಪಿ ಅಭ್ಯರ್ಥಿ ದಾವಣಗೆರೆಯಿಂದ ಗೆದ್ದು ಪ್ರಧಾನಿ ನರೇಂದ್ರ ಮೋದಿಗೆ ಕಮಲದ ಹೂವು ಅರ್ಪಿಸುತ್ತೇನೆ ಎನ್ನುತ್ತಿದ್ದಾರೆ. ಈ ಹಿಂದೆಯೂ ಗೆದ್ದಿದ್ದು ನೀವೆ (ಜಿಎಂ ಸಿದ್ದೇಶ್ವರ) ಅಲ್ಲವೇ? ಆಗ ಹೂವನ್ನು ಕಳುಹಿಸಿದ್ರಾ?. ಮೋದಿಗೆ ಹೂವನ್ನು ಕಳುಹಿಸಿದರೆ ಅಭಿವೃದ್ಧಿ ಆಗುವುದಿಲ್ಲ. ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಕೇವಲ ಮೋದಿ ಮೋದಿ ಎನ್ನುವುದರಿಂದ ಅಭಿವೃದ್ಧಿಯಾಗಲ್ಲ ಎಂದು ಕಿಡಿಕಾರಿದ್ದರು.

ಗಾಯತ್ರಿ ಸಿದ್ದೇಶ್ವರ ತಿರುಗೇಟು

 Gayatri Siddheshwar ಶಿವಶಂಕರಪ್ಪ ಅವರ ಮಾತಿಗೆ ವಿರೋಧ ವ್ಯಕ್ತಪಡಿಸಿರುವ ಗಾಯತ್ರಿ, ಶಾಮನೂರು ಶಿವಶಂಕರಪ್ಪ ಅವರು ತಮ್ಮ ಮಾತುಗಳಿಂದ ಮಹಿಳೆಯರನ್ನು ಅವಮಾನಿಸಿದ್ದಾರೆ. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದು, ಅಡುಗೆ ಮನೆಗೆ ಮಾತ್ರ ಸೀಮಿತವಾಗಿಲ್ಲ. ಅವರು ಸಮರ್ಥವಾಗಿ ಅಧಿಕಾರವನ್ನು ನಡೆಸುತ್ತಾರೆ. ಇದು ‘ಅಜ್ಜ’ನಿಗೆ ತಿಳಿದಿಲ್ಲದಂತಿದೆ ಎಂದಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...