Friday, March 20, 2026
Friday, March 20, 2026

Death News ಗಾಡಿಕೊಪ್ಪದ ಮನೆಯಲ್ಲಿ ನೇಣಿಗೆ ಶರಣಾದ ಸಾಫ್ಟ್ ವೇರ್ ಉದ್ಯೋಗಸ್ಥ ಮಹಿಳೆ

Date:

Death News ಸಾಫ್ಟ್‌ವೇರ್ ಉದ್ಯೋಗಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಡಿಕೊಪ್ಪದಲ್ಲಿ ಸಂಭವಿಸಿದೆ.
ಶುಕ್ರವಾರ ಸಂಜೆ ವೇಳೆ ಈ ಘಟನೆ ನಡೆದಿದ್ದು ಮಹಿಳೆಯ ಪತಿ ಹಾಗೂ ಅತ್ತೆ ಮಾವನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಹಿಳೆಯು ಪತಿಯ ಮನೆಯಲ್ಲಿ ತನಗಾಗುತ್ತಿರುವ ತೊಂದರೆಯನ್ನು ತವರು ಮನೆಯವರ ಬಳಿ ಹೇಳಿಕೊಂಡಿದ್ದಳು. ಸಾಯುವುದಕ್ಕೂ ಕೆಲಹೊತ್ತಿಗೂ ಮೊದಲೇ ಆಡಿದ ಮಾತುಗಳನ್ನು ಫೋನ್ ಕರೆಯಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ತವರು ಮನೆಯವರು ವಿಚಾರಿಸಲು ಮಹಿಳೆಯ ಗಂಡನ ಮನೆಗೆ ಹೋದಾಗ ಆಕೆ ಬಾಗಿಲು ಹಾಕಿಕೊಂಡು ರೂಮಿನಲ್ಲಿರುವುದು ಗೊತ್ತಾಗಿದೆ.
Death News ಬಾಗಿಲು ತಟ್ಟಿದರೂ ತೆರೆಯದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳಗೆ ನೋಡಿದ್ರೆ ಮಹಿಳೆಯು ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸರಿಗೆ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.
ಕುಟುಂಬಸ್ಥರು ಮಹಿಳೆಯ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದು, ವರದಕ್ಷಿಣೆಗಾಗಿ ತೊಂದರೆ ಕೊಡುತ್ತಿದ್ದರು ಎಂದು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...