Friday, March 20, 2026
Friday, March 20, 2026

KPCC ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಶಿವಮೊಗ್ಗ ಭೇಟಿ, ಸರಣಿ ಸಭೆಗಳಲ್ಲಿ ಭಾಗಿ

Date:

KPCC ಕೆಪಿಸಿಸಿಯ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ನಂತರ ಮೊದಲ ಬಾರಿಗೆ ವಿಧಾನಪರಿಷತ್ ಸದಸ್ಯರಾದ .ಮಂಜುನಾಥ ಭಂಡಾರಿ ಏಪ್ರಿಲ್ 1 ಕ್ಕೆ ಶಿವಮೊಗ್ಗಕ್ಕೆ ಆಗಮಿಸಲ್ಲಿದ್ದಾರೆ.
ಶಿವಮೊಗ್ಗ ಕ್ಷೇತ್ರವೂ ಕೂಡ ಇವರ ಕಾರ್ಯಾಧ್ಯಕ್ಷ ವ್ಯಾಪ್ತಿಗೆ ಬರುವುದರಿಂದ ನಾಳೆ ಇಡೀ ದಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಶಾಸಕರು, ವಿವಿಧ ನಿಗಮಗಳ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಸಭೆಗಳನ್ನು ನಡೆಸಿ ಜಿಲ್ಲೆಯಲ್ಲಿ ಕಾಂಗ್ರೆಸ್ಸಿಗರನ್ನು ಚುನಾವಣೆಗೆ ಸಜ್ಜುಗೊಳಿಸಲ್ಲಿದ್ದಾರೆ.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪನವರು ಉಪಸ್ಥಿತರಿರುತ್ತಾರೆ. ಸಭೆಯು ಜಿಲ್ಲಾ ಕಾಂಗ್ರೆಸ ಸಮಿತಿ ಅಧ್ಯಕ್ಷರು ಹಾಗೂ ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಯಲ್ಲಿ ಭದ್ರಾವತಿ ಕ್ಷೇತ್ರದ ಶಾಸಕರಾದ ಗ್ರಾಮೀಣಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ್, ಸಾಗರ ಕ್ಷೇತ್ರದ ಶಾಸಕರಾದ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ.ಆರ್.ಎಂ.ಮಂಜುನಾಥಗೌಡ ಹಾಗೂ ವಿವಿಧ ನಿಗಮಗಳ KPCC ಅಧ್ಯಕ್ಷರು, ಮಾಜಿ ಶಾಸಕರು, ವಿಧಾನಸಭೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಲ್ಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...