Thursday, August 13, 2026
Thursday, August 13, 2026

McGann District Hospital ಬಸ್ಸಿನ ಟೈರ್ ಸ್ಫೋಟ:ಬಾಲಕಿ ಪ್ರಾಣಾಪಾಯದಿಂದ ಪಾರು

Date:

McGann District Hospital ಟೈರ್‌ ಸ್ಪೋಟಗೊಂಡು ಸಿಟಿ ಬಸ್ಸಿನಿಂದ ಬಾಲಕಿಯೊಬ್ಬಳು ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ. ಕೂಡಲೇ ಬಾಲಕಿಯನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಶಿವಮೊಗ್ಗದ ನೆಹರು ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಸಿಟಿ ಬಸ್ಸಿನ ಟೈರ್‌ ಸ್ಪೋಟದ ರಭಸಕ್ಕೆ ಬಸ್ಸಿನ ಒಳಗೆ ರಂದ್ರವಾಗಿದೆ. ಚಾಲಕನ ಹಿಂಬದಿ ಸೀಟಿನಲ್ಲಿದ್ದ ಬಾಲಕಿ ರಂದ್ರದೊಳಗಿನಿಂದ ರಸ್ತೆಗೆ ಬಿದ್ದಿದ್ದಾಳೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ನೆಹರೂ ರಸ್ತೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಂತಿದೆ. ಅದೃಷ್ಟವಶಾತ್‌ ಬಾಲಕಿಯ ಪ್ರಾಣ ಉಳಿದಿದೆ. ಬಸ್ಸಿನ ಸಿಬ್ಬಂದಿ, ಪ್ರಯಾಣಿಕರು ಮತ್ತು ಸಾರ್ವಜನಿಕರ ನೆರವಿನಿಂದ ಬಾಲಕಿಯನ್ನು ಕೂಡಲೇ ಆಟೋದಲ್ಲಿ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ.

McGann District Hospital ಬಸ್ಸು ಬೊಮ್ಮನಕಟ್ಟೆಯಿಂದ ಗೋಪಾಳಕ್ಕೆ ತೆರಳುತ್ತಿತ್ತು. ಘಟನೆಯಿಂದಾಗಿ ನೆಹರೂ ರಸ್ತೆಯಲ್ಲಿ ಕೆಲಹೊತ್ತು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...