Monday, February 2, 2026
Monday, February 2, 2026

Voter Awareness ಶಿವಮೊಗ್ಗ ಜನ: ಮಾಡೇ ಮಾಡ್ತೀವಿ ಮತದಾನ ಜಾಗೃತಿ ಬೈಕ್ ಜಾಥಾ

Date:

Voter Awareness  ಜಿಲ್ಲಾಡಳಿತ, ಜಿ.ಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಇಂದು ಜಿಲ್ಲಾಡಳಿತ ಕಚೇರಿ ಆವರಣದಿಂದ ಅಲ್ಲಮಪ್ರಭು ಮೈದಾನದವರೆಗೆ ಮತದಾನ ಕುರಿತು ಜಾಗೃತಿ ಮೂಡಿಸುವ ಬೈಕ್ ರ್ಯಾಲಿಯನ್ನು ನಡೆಸಲಾಯಿತು.


ಲೋಕಸಭಾ ಚುನಾವಣೆ -2024 ಪ್ರಯುಕ್ತ ಸಾರ್ವಜನಿಕರಲ್ಲಿ ಮತದಾನದ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ವತಿಯಿಂದ ಇಂದು ಏರ್ಪಡಿಸಲಾಗಿದ್ದ ಬೈಕ್ ರ್ಯಾಲಿಗೆ ಜಿ.ಪಂ.ಸಿಇಒ ನೀಡಿ, ತಾವೂ ಬೈಕ್ ಚಲಾಯಿಸಿಕೊಂಡು ಅಲ್ಲಮಪ್ರಭು ಮೈದಾನ(ಫ್ರೀಡಂ ಪಾರ್ಕ್) ತಲುಪಿದರು.


Voter Awareness  ರ್ಯಾಲಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡು, ಮತದಾನದ ಜಾಗೃತಿ ಕುರಿತು ಘೋಷಣೆಗಳುಳ್ಳ ಪ್ಲೆಕಾರ್ಡ್ ಗಳನ್ನು ಹಿಡುದು ಘೋಷಣೆ ಕೂಗುತ್ತಾ ಸಾಗಿದರು. ರ್ಯಾಲಿಯು ಡಿಸಿ ಕಚೇರಿಯಿಂದ ಹೊರಟು ಗೋಪಿ ಸರ್ಕಲ್ ಮುಖಾಂತರ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ತಲುಪಿ ನಂತರ ಸಕ್ರ್ಯೂಟ್ ಹೌಸ್, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ಸಿಗ್ನಲ್ ಮೂಲಕ ಅಲ್ಲಮ ಪ್ರಭು ಮೈದಾನ ತಲುಪಿತು.
“ನೋಡಿ ನಾವು ಶಿವಮೊಗ್ಗ ಜನ, ಮಾಡೇ ಮಾಡ್ತಿವಿ ಮತದಾನ” “ಜೋಗ ನೋಡೋದು ವೈಭೋಗ ಮತದಾನ ಮಾಡೋದು ಸುಯೋಗ” ಎಂಬಿತ್ಯಾದಿ ಘೋಷಣೆಗಳೊಂದಿಗೆ ರ್ಯಾಲಿನಿರತರು ಸಾಗಿದರು. ಜಿಲ್ಲಾಡಳಿತ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿಯಿಂದ ಇರಿಸಲಾಗಿರುವ ಸೆಲ್ಫಿ ಕಾರ್ನರ್‍ನಲ್ಲಿ ಮಹಿಳೆಯರು, ರ್ಯಾಲಿಯಲ್ಲಿ ಪಾಲ್ಗೊಂಡವರು ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಂಡರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಜಿ.ಪಂ ಯೋಜನಾ ನಿರ್ದೇಶಕ ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಸ್ವೀಪ್ ನೋಡಲ್ ಆಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...