Tuesday, October 1, 2024
Tuesday, October 1, 2024

Jeevan Kirana Old Age Home ಜೀವನ ಕಿರಣ‌ ವೃದ್ಧಾಶ್ರಮದಲ್ಲಿ ಮತದಾನ‌ ಜಾಗೃತಿ‌ ಮಾಹಿತಿ

Date:

Jeevan Kirana Old Age Home ಶಿವಮೊಗ್ಗ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಶಿವಮೊಗ್ಗ ಹಾಗೂ ವಿಕಲಚೇತನರ ಇಲಾಖೆ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಏ.04 ರಂದು ಭದ್ರಾವತಿ ತಾಲೂಕಿನ ಅಗರದಹಳ್ಳಿ ಗ್ರಾಮದ ‘ಜೀವನ ಕಿರಣ ಓಲ್ಡ್ ಏಜ್ ಹೋಮ್’ ನಲ್ಲಿ ಲೋಕಸಭಾ ಚುನಾವಣೆ 2024ರ ಮತದಾನ ಜಾಗೃತಿ ಕಾರ್ಯಕ್ರಮವನ್ನು ವಿನೂತನವಾಗಿ ಆಚರಿಸಲಾಯಿತು.

ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೀಜ್ ಮಾತನಾಡಿ, ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಲು 85 ವರ್ಷ ಮತ್ತು ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಶೇಕಡ 40 ಅಧಿಕ ಅಂಗವಿಕಲತೆ ಹೊಂದಿರುವ ವಿಶೇಷ ವಿಕಲಚೇತನರಿಗಾಗಿ ಮನೆಯಿಂದಲೇ ಮತದಾನ ಚಲಾಯಿಸುವ ಅವಕಾಶ ನೀಡಿದ್ದು ಅರ್ಜಿ ನಮೂನೆ 12 ಡಿ ಅಂಚೆ ಮತದಾನದ ಮಾಡಬಹುದು.
ಮತದಾರರ ನೋಂದಣಿ ಹಾಗೂ ತಿದ್ದುಪಡಿಗೆ ಮಾಡಲು ಏಪ್ರಿಲ್ 9 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು, ಸೇರ್ಪಡೆ ಗಾಗಿ ನಮೂನೆ 6 ಹಾಗೂ ಯಾವುದೇ ತಿದ್ದುಪಡಿಗಳಿಗಾಗಿ ನಮೂನೆ 8 ಅನ್ನು ಸಲ್ಲಿಸುವಂತೆ ತಿಳಿಸಿದ ಅವರು ವೋಟರ್ ಹೆಲ್ಪ್‍ಲೈನ್ ಆಪ್, ಸಿ-ವಿಜಿಲ್ ಆಪ್ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.


Jeevan Kirana Old Age Home
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಮಾತನಾಡಿ, ಚುನಾವಣಾ ಆಯೋಗದಿಂದ ಹಿರಿಯ ನಾಗರಿಕರಿಗಾಗಿ ಇರುವಂತಹ ಮತದಾನದ ಸೇವಾ ಸೌಲಭ್ಯಗಳ ಮಾಹಿತಿ ನೀಡಿದರು.
ನಂತರ ಹಿರಿಯ ನಾಗರೀಕರಿಗೆ ‘ನಾ ಭಾರತ’ ಎಂಬ ಚುನಾವಣಾ ಗೀತೆ ಗಾಯನ, ಪಾಸಿಂಗ್ ದಿ ಬಾಲ್ ಒಳಾಂಗಣ ಕ್ರೀಡೆಯನ್ನು ಆಡಿಸಿ, ಚುನಾವಣಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಶಿರೇಖಾ, ಸಿಆರ್‍ಪಿ ರಂಗನಾಥ್, ವೃದ್ಧಾಶ್ರಮದ ಹಿರಿಯ ನಾಗರಿಕರು, ಕಚೇರಿ ಸಿಬ್ಬಂದಿ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಸಿಬ್ಬಂದಿ ವರ್ಗ ಮತ್ತು ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾ ಮಕ್ಕಳು ಹಾಜರಿದ್ದರು.
(ಫೋಟೊ ಇದೆ)

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...