SVEEP Committee ಶಿವಮೊಗ್ಗ ಜಿಲ್ಲಾ ಹಾಗೂ ಸೊರಬ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಇಂದು ಶಿಗ್ಗಾ ಗ್ರಾಮ ಪಂಚಾಯ್ತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಸೊರಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ, ಐಇಸಿ ಕೋ-ಆರ್ಡಿನೇಟರ್ ಚಂದ್ರೇಗೌಡ ಮತ್ತು ತಾಲೂಕು ಪಂಚಾಯತಿ ಸಿಬ್ಬಂದಿಗಳು ಹಾಗೂ ಊರಿನ ಗ್ರಾಮಸ್ಥರು ಗ್ರಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.