Friday, September 27, 2024
Friday, September 27, 2024

SVEEP Committee Shivamogga ಮತದಾನ ಮಾಡುವ ಮೂಲಕ ಸದೃಢ ಭಾರತ ನಿರ್ಮಾಣ-ಸ್ನೇಹಲ್ ಸುಧಾಕರ್ ಲೋಖಂಡೆ

Date:

SVEEP Committee Shivamogga ಪ್ರತಿಯೊಬ್ಬ ನಾಗರೀಕರು ಮತದಾನ ಮಾಡುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಶಿವಮೊಗ್ಗ ಹಾಗೂ ಕೆಎಸ್‍ಆರ್‍ಪಿ ಮಾಚೇನಹಳ್ಳಿ ಇವರ ವತಿಯಿಂದ ಶನಿವಾರ ಮಾಚೇನಹಳ್ಳಿಯ ಕೆಎಸ್‍ಆರ್‍ಪಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಲೋಕಸಭಾ ಚುನಾವಣೆ 2024ರ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣಾ ಆಯೋಗವು ಸ್ವೀಪ್ ಕಾರ್ಯಕ್ರಮದ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಸುತ್ತಿದೆ. ದೇಶದ ಭವಿಷ್ಯವನ್ನು ನಿರ್ಧರಿಸುವ ಈ ಚುನಾವಣೆಯಲ್ಲಿ ಪ್ರತಿಯೊಬ್ಬರು ಕೂಡ ಕಡ್ಡಾಯವಾಗಿ ಮತದಾನ ಮಾಡಬೇಕು. ಪೊಲೀಸ್ ಸಿಬ್ಬಂದಿಗಳು ಚುನಾವಣಾ ಕರ್ತವ್ಯಕ್ಕಾಗಿ ಬೇರೆ ಬೇರೆ ಜಿಲ್ಲೆಗಳಿಗೆ ತೆರಳುವ ಸಂದರ್ಭ ಬಂದಲ್ಲಿ ಕಡ್ಡಾಯವಾಗಿ ಅಂಚೆ ಮತದಾನದ ಮೂಲಕ ಮತವನ್ನು ಚಲಾಯಿಸಬೇಕು.

SVEEP Committee Shivamogga ನೀವು ಮತದಾನ ಮಾಡುವುದರ ಜೊತೆಗೆ ನಿಮ್ಮ ಕುಟುಂಬದವರಿಗೂ ಹಾಗೂ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಜನರಿಗೂ ಮತದಾನದ ಬಗ್ಗೆ ಅರಿವು ಮೂಡಿಸಿ ಶೇ. 100 ರಷ್ಟು ಮತದಾನ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಆಗಬೇಕು. ಅದ್ದಕ್ಕಾಗಿ ಪ್ರತಿಯೊಬ್ಬರು ತಮ್ಮ ಕರ್ತವ್ಯ ಎಂದು ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಅವರು ಚುನಾವಣಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಬೇಕು ಎನ್ನುವ ಉದ್ದೇಶದಿಂದ 85 ವರ್ಷ ಮತ್ತು ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ಶೇ. 40 ಕ್ಕೂ ಅಧಿಕ ಅಂಗವಿಕಲತೆ ಹೊಂದಿರುವ ವಿಶೇಷ ವಿಕಲಚೇತನರಿಗಾಗಿ ಅರ್ಜಿ ನಮೂನೆ 12 ಡಿ ಅಂಚೆ ಮತದಾನದ ಮೂಲಕ ಮನೆಯಿಂದಲೇ ಮತದಾನ ಚಲಾಯಿಸುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ.

ಮತದಾರರ ನೋಂದಣಿ ಹಾಗೂ ತಿದ್ದುಪಡಿ ಮಾಡಲು ಏಪ್ರಿಲ್ 9 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೊಸ ಸೇರ್ಪಡೆಗಾಗಿ ನಮೂನೆ 6 ಹಾಗೂ ಯಾವುದೇ ತಿದ್ದುಪಡಿಗಳಿಗಾಗಿ ನಮೂನೆ 8 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವೋಟರ್ ಹೆಲ್ಪ್‍ಲೈನ್ ಆಪ್, ಸಿ-ವಿಜಿಲ್ ಆಪ್ ಮೂಲಕ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದರು.

ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೀಜ್ ಮಾತನಾಡಿ, ಸ್ವೀಪ್ ಚಟುವಟಿಕೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿ, ಕೆಎಸ್‍ಆರ್‍ಪಿ ಪೊಲೀಸ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ಪಾಸಿಂಗ್ ದಿ ಬಾಲ್ ಒಳಾಂಗಣ ಕ್ರೀಡಾಕೂಟ ನಡೆಸಿಕೊಟ್ಟರು.
ಚುನಾವಣೆ ಗೀತೆಯಾದ ‘ನಾ ಭಾರತ’ ಗೀತೆಯನ್ನು ಪ್ರಸ್ತುತ ಪಡಿಸಿ, ಮೇ 7 ರಂದು ನಡೆಯುವ ಮತದಾನದಂದು ಕಡ್ಡಾಯವಾಗಿ ಮತದಾನ ಮಾಡುವಂತೆ ಚುನಾವಣಾ ಪರ್ವ ದೇಶದ ಗರ್ವ ಎಂಬ ಘೋಷಣೆಯೊಂದಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಈ ಸಂಧರ್ಭದಲ್ಲಿ ಕೆಎಸ್‍ಆರ್‍ಪಿ ಕಮಾಂಡೆಂಟ್ ಯುವಕುಮಾರ್, ಅಸಿಸ್ಟೆಂಟ್ ಕಮಾಂಡೆಂಟ್ ಹಾಲ ರಮೇಶ್ ,ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳು, ಕೆಎಸ್ ಆರ್‍ಪಿ ಸಿಬ್ಬಂದಿಗಳು ಉಪಸ್ಥಿತರಿದ್ದರು ‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...