Sunday, September 27, 2026
Sunday, September 27, 2026

Lok Sabha Election ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲು

Date:

Lok Sabha Election ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್.ಈಶ್ವರಪ್ಪನವರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ.

Lok Sabha Election ಏ.೫ ರಂದು ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ, ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅಲ್ಲಿ ಅವರ ಮನೆಯ ಅಂಗಳದಲ್ಲಿ ಸುಮಾರು ೫೦ ರಿಂದ ೬೦ ಜನರನ್ನು ಸೇರಿಸಿಕೊಂಡು ೫೦ ಕುರ್ಚಿಗಳು ಹಾಗೂ ಹ್ಯಾಂಡ್‌ ಮೈಕ್‌ ಒಳಗೊಂಡಂತೆ ಸಣ್ಣ ವೇದಿಕೆ ರೀತಿಯಲ್ಲಿ ಸಭೆ ನಡೆಸಿ ಅವರು ರಾಜಕೀಯ ಪ್ರೇರಿತ ಭಾಷಣವನ್ನು ಮಾಡಿರುತ್ತಾರೆ. ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿಯನ್ನು ಈ ಕಾ‍ರ್ಯಕ್ರಮ ನಡೆಸಲು ಪಡೆದಿರುವುದಿಲ್ಲ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಸಂಜ್ಞೆಯ ಅಪರಾದ ಪ್ರಕರಣವಾದ್ದರಿಂದ ನ್ಯಾಯಾಲಯದ ಅನುಮತಿ ಪಡೆದು ಕೆ.ಎಸ್‌ ಈಶ್ವರಪ್ಪ ರವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...