Thursday, March 19, 2026
Thursday, March 19, 2026

IPL Cricket ಕೊಹ್ಲಿ ,ಐಪಿ ಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್

Date:

IPL Cricket ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸುತ್ತಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ತಮ್ಮ ಎಂಟನೇ ಶತಕ ಸಿಡಿಸಿದ ಅವರು ಮತ್ತೊಂದು ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ಮೊದಲ ಬ್ಯಾಟರ್ ಆಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ.
ಜೈಪುರದ ಸವಾಯ್ ಮಾನ್‌ಸಿಂಗ್ ಕ್ರಿಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಆರು ವಿಕೆಟ್‌ಗಳ ಗೆಲುವು ಸಾಧಿಸಿದೆ. ಐಪಿಎಲ್ 2024ರ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಶತಕ ಗಳಿಸಿದರೆ, ಅದೇ ಪಂದ್ಯದಲ್ಲಿ ಜೋಸ್ ಬಟ್ಲರ್ ಕೂಡ ಶತಕ ಗಳಿಸಿ ಆರ್‌ಆರ್ ತಂಡಕ್ಕೆ ಗೆಲುವು ತಂದುಕೊಟ್ಟರು.
IPL Cricket ಶನಿವಾರ ನಡೆದ ಆರ್‌ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿಯೇ ಕೊಹ್ಲಿ ಈ ಸಾಧನೆ ಮಾಡಿದರು. 7ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಒಂದು ರನ್ ಗಳಿಸಿದ ಕೊಹ್ಲಿ ಐಪಿಎಲ್‌ನಲ್ಲಿ 7,500 ರನ್‌ ಗಳಿಸಿದ ಮೊದಲ ಬ್ಯಾಟರ್ ಎನ್ನುವ ಕೀರ್ತಿಗೆ ಭಾಜನರಾದರು. ಅವರು ತಮ್ಮ 242ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.
ಕೊಹ್ಲಿ ಈಗ 52 ಅರ್ಧ ಶತಕಗಳೊಂದಿಗೆ 37 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 7,500 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಪಂದ್ಯಾವಳಿಯಲ್ಲಿ ಆರ್‌ಸಿಬಿ ಪರವಾಗಿ ಪ್ರಮುಖ ರನ್-ಸ್ಕೋರರ್ ಆಗಿರುವ ಕೊಹ್ಲಿ, ತಮ್ಮ ಮೂರನೇ ಅರ್ಧಶತಕವನ್ನು ಪೂರೈಸಿದರು.

ವಿರಾಟ್ ಕೊಹ್ಲಿ ನಂತರ ಶಿಖರ್ ಧವನ್ 6,755 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...