Monday, May 4, 2026
Monday, May 4, 2026

Chennai Police ತಾಂಬರಂ ರೈಲು ನಿಲ್ದಾಣದಲ್ಲಿ ನಾಲ್ಕು ಕೋಡಿ ರೂಪಾಯಿ ನಗದು ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಅರೆಸ್ಟ್

Date:

Chennai Police ಚೆನ್ನೈ ತಾಂಬರಂ ರೈಲು ನಿಲ್ದಾಣದಲ್ಲಿ 4 ಕೋಟಿ ರೂ.ನಗದು ಸಾಗಾಟಬ ಮಾಡುವಾಗ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಆರೋಪಿಗಳನ್ನು ಬಿಜೆಪಿ ಸದಸ್ಯ ಹಾಗೂ ಅಗರಂ ಮೂಲದ ಎಸ್ ಸತೀಶ್ (33), ಆತನ ಸಹೋದರ ಎಸ್ ನವೀನ್ (31), ತೂತುಕುಡಿಯ ಎಸ್ ಪೆರುಮಾಳ್ (26) ಎಂದು ಗುರುತಿಸಲಾಗಿದೆ. ಎರಡನೇ ದರ್ಜೆಯ ಎಸಿ ಕೋಚ್‌ನಲ್ಲಿ ಶೋಧ ನಡೆಸಿದಾಗ ಅವರು ಸಾಗಿಸುತ್ತಿದ್ದ ಬ್ಯಾಗ್‌ಗಳಲ್ಲಿ 500ರ ನೋಟುಗಳ ಕಂತೆ ಪತ್ತೆಯಾಗಿತ್ತು. ಇವರು ಆರು ಬ್ಯಾಗ್‌ಗಳಲ್ಲಿ 4 ಕೋಟಿ ರೂ.ಹಣವನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ.

Chennai Police ಮೂವರು ರೈಲಿನಲ್ಲಿ ತಿರುನಲ್ವೇಲಿಗೆ ತೆರಳುತ್ತಿದ್ದಾಗ ಫ್ಲೈಯಿಂಗ್ ಸ್ಕ್ವಾಡ್ ಅವರನ್ನು ವಶಕ್ಕೆ ಪಡೆದಿದೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಕುರಿತು ಮಾಹಿತಿಯನ್ನು ಸ್ವೀಕರಿಸಿದ ನಂತರ, ಪೊಲೀಸರು ಮತ್ತು ತಾಂಬರಂನಲ್ಲಿ ಬೀಡುಬಿಟ್ಟಿದ್ದ ಫ್ಲೈಯಿಂಗ್ ಸ್ಕ್ವಾಡ್ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಚೆನ್ನೈನ ತಾಂಬರಂ ರೈಲು ನಿಲ್ದಾಣಕ್ಕೆ ತೆರಳಿದ್ದರು.

ನಂತರ ಪೊಲೀಸರು ಮೂವರೂ ಶಂಕಿತರನ್ನು ಬಂಧಿಸಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವರದಿಗಳ ಪ್ರಕಾರ, ಐಟಿ ತಂಡಗಳು ಆರೋಪಿಗಳನ್ನು ವಿಚಾರಣೆ ನಡೆಸಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...