ಸಿದ್ಧಾಂತಕ್ಕೆ ವಿರುದ್ಧವಾಗಿ ಬಿಜೆಪಿಯ ಪಕ್ಷದಲ್ಲಿ ಕಾರ್ಯಚಟುವಟಿಕೆ ನಡೆಯುತ್ತಿದ್ದು, ಒಂದು ಕುಟುಂಬಕ್ಕೆ ಒಂದು ಹುದ್ದೆ ಎನ್ನುವ ಸಿದ್ಧಾಂತವನ್ನು ಗಾಳಿಗೆ ತೂರಲಾಗಿದೆ. ಹಿಂದೂ ಹೋರಾಟಗಾರರನ್ನು ಹತ್ತಿಕ್ಕುವ ಹಾಗೂ ಹಿಂದೂ ಧರ್ಮದ ಪರವಾಗಿ ಧ್ವನಿ ಎತ್ತುವವರನ್ನು ತುಳಿಯುವ ಕೆಲಸ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಶನಿವಾರ ಪಟ್ಟಣದ ರಂಗನಾಥ ದೇವಸ್ಥಾನ ಸಮೀಪದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ರಾಷ್ಟç ಭಕ್ತರ ಬಳಗದ ಕಚೇರಿ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿಲ್ಲ. ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ತಮ್ಮ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಟಿಕೇಟ್ ನೀಡುವ ಭರವಸೆ ನೀಡಿದ್ದರು ಎಂದರು.
K.S.Eshwarappa ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರದ ಕ್ಷೇತ್ರದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ. ಪ್ರಸ್ತುತ ಪಕ್ಷದ ಯಾವುದೇ ಹುದ್ದೆಯಲ್ಲೂ ಇಲ್ಲ. ಜೊತೆಗೆ ಅಧಿಕಾರದಲ್ಲಿಯೂ ಇಲ್ಲ. ಪಕ್ಷ ಸಂಘಟನೆಗಾಗಿ ಕಳೆದ ನಾಲ್ಕು ದಶಕದಿಂದ ಶ್ರಮಿಸಿದ್ದೇನೆ. ಪುತ್ರ ಕಾಂತೇಶ್ ಅವರಿಗೆ ಟಿಕೇಟ್ ಕೇಳಿದ್ದೆ ಅಷ್ಟೆ. ಇದೀಗ ಪಕ್ಷದಲ್ಲಿ ನಡೆಯುತ್ತಿರುವ ಕುಟುಂಬ ರಾಜಕಾರಣದ ವಿರುದ್ಧವಾಗಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವ ದಿಟ್ಟ ನಿರ್ಧಾರ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದರು.
ಏ.೧೨ ರಂದು ತಾವು ನಾಮಪತ್ರ ಸಲ್ಲಿಸುತ್ತಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರಲ್ಲದೆ ಹಿಂದೂ ಪರ ಸಂಘಟನೆಗಳು ಸಹ ತಮ್ಮೊಂದಿಗೆ ಇದೆ. ತಮಗೆ ನೇರ ಸ್ಪರ್ಧಿ ಎನ್ನುವುದಿಲ್ಲ. ಗೆಲುವು ನಿಶ್ಚಿತ ಎಂದರು.
K.S.Eshwarappa ಬಿ.ಎಸ್.ಯಡಿಯೂರಪ್ಪ ನುಡಿದಂತೆ ನಡೆಯಲಿಲ್ಲ- ಈಶ್ವರಪ್ಪ
Date: