Tuesday, February 3, 2026
Tuesday, February 3, 2026

Geeta Shivraj Kumar ಕೇಂದ್ರದಲ್ಲಿ ದನಿಯೆತ್ತಲು ನನಗೆ ಮತ ನೀಡಿ ಅವಕಾಶಕೊಡಿ- ಗೀತಾ ಶಿವರಾಜ್ ಕುಮಾರ್

Date:

Geeta Shivraj Kumar ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ. ಆದ್ದರಿಂದ, ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬಡವ, ಶ್ರೀಮಂತ ಎಂಬ ಬೇಧಭಾವ ತೋರದೆ, ಪ್ರತಿಯೊಬ್ಬರಿಗೂ ನಮ್ಮ ಕಾಂಗ್ರೆಸ್ ಪಕ್ಷದ ಜನಪರ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಅದೇ, ರೀತಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಬೈಂದೂರು ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅದನ್ನು ಮುಂದುವರೆಸಿಕೊಂಡು ಹೋಗಲು ನನಗೆ ಅವಕಾಶ ಕಲ್ಪಿಸಿಕೊಡಿ ಎಂದರು.
Geeta Shivraj Kumar ರಾಜ್ಯದಲ್ಲಿ ದಿನ ನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ತಲೆದೂರಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ನರೇಗಾ ಯೋಜನೆಗೆ ಬೇಡಿಕೆ ಹೆಚ್ಚಿದೆ. ಆದರೆ ಕೆಲಸವಿಲ್ಲ. ನಂದಿನಿ ಹಾಲು ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಇದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರದಲ್ಲಿ ಧ್ವನಿ ಎತ್ತಲು, ನನಗೆ ಮತ ನೀಡಿ ಅವಕಾಶ ಒದಗಿಸಿಕೊಡಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...