Thursday, September 17, 2026
Thursday, September 17, 2026

Fake News  ಸುಳ್ಳು ಸುದ್ದಿ ಪ್ರಕಟಿಸಿ ಸೀಎಂ ಗೌರವಕ್ಕೆ ಚ್ಯುತಿ: ಆರೋಪಿಗಳ ಬಂಧನಕ್ಕೆ ಬಲೆಬೀಸಿರುವ ಪೋಲಿಸ್

Date:

Fake News  ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹಂಚಿಕೊಂಡು, ಕೋಮುಸಾಮರಸ್ಯಕ್ಕೆ ಧಕ್ಕೆ ತಂದ ಏಳು ಜನ ಕಿಡಿಗೇಡಿಗಳ ವಿರುದ್ಧ ಬೆಂಗಳೂರು ದಕ್ಷಿಣ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು ನಿವಾಸಿ ಹರೀಶ್ ನಾಗರಾಜು ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದು, ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸಾಮಾಜಿಕ ಜಾಲತಾಣ ವೇದಿಕೆಗಳಾದ ವಾಟ್ಸಾಪ್, ಫೇಸ್‌ಬುಕ್ ಮತ್ತು ಎಕ್ಸ್‌ ಖಾತೆಗಳಲ್ಲಿ ಸಿದ್ದರಾಮಯ್ಯ ಕುರಿತ ಸುಳ್ಳು ಸುದ್ದಿ ಪತ್ರಿಕಾ ತುಣುಕು ಹಂಚಿಕೊಂಡಿರುವವರ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಕುರಿತು ಸ್ವತಃ ಸಿದ್ಧರಾಮಯ್ಯ ತಮ್ಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದು, ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು’ ಎಂದು ಹೇಳಿದ್ದಾರೆ.

Fake News  ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ. ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು ಎಂದು ಅವರ ಕಿಡಿಕಾರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...