Madhu Bangarappa ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಸೊರಬ ತಾಲ್ಲೂಕಿನ ಶಿಗ್ಗಾ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕ ಬಹಿರಂಗ ಸಭೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಯ ಬಿಜೆಪಿ ಸಂಸದರು ಆಯ್ಕೆಗೊಂಡು ೧೦ ವರ್ಷ ಕಳೆದಿದೆ. ಆದರೆ, ಮುಳುಗಡೆ ಸಂತ್ರಸ್ತರು ಹಾಗೂ ಬಗರ್ ಹುಕುಂ ಸಾಗುವಳಿ ರೈತರಿಗೆ ಹಕ್ಕು ಪತ್ರ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರದ ಹಂತದಲ್ಲಿ ಬಗೆಹರಿಸಬೇಕಿದ್ದ ಸಮಸ್ಯೆಗಳು ಜಿಲ್ಲೆಗೆ ಕಪ್ಪು ಚುಕ್ಕೆಯಾಗಿ ಉಳಿದುಕೊಂಡಿವೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಳ್ಳು ಭಾಷಣ ಮಾಡಿಕೊಂಡು ಜನ ಸಾಮಾನ್ಯರಿಗೆ ನಾಮ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಬಡವರು ಉಸಿರಾಡುತ್ತಿದ್ದಾರೆ. ಇದಕ್ಕೆ ಮಸಿ ಬಳಿಯಲು ಬಿಜೆಪಿಯವರು ಸಂಚು ಹೂಡುತ್ತಿದ್ದಾರೆ. ಇದಕ್ಕೆ ಜನರು ಆಸ್ಪದ ಕೊಡಕೂಡದು ಎಂದರು.
ಕಾoಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆರಳಾಗಿ ನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಯೋಜನೆಗಳಿಗೆ ಶಕ್ತಿ ತುಂಬಿದ್ದಾರೆ ಎಂದರು.
Madhu Bangarappa ಸೊರಬ ತಾಲ್ಲೂಕು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರನ್ನು ದೇವರ ರೀತಿ, ಕಾಣುತ್ತಿದ್ದ ನೆಲ. ಅದೇ ಬಂಗಾರಪ್ಪ ಅವರ ಮಗಳು ನಾನು. ಅವರ ಹಾದಿಯಲ್ಲಿ ಸಾಗಲು ನನಗೂ ಒಂದು ಅವಕಾಶ ಕೊಡಿ ಎಂದರು.
Madhu Bangarappa ಬಿಜೆಪಿ ಸಂಸದರು10 ವರ್ಷ ಕಳೆದರೂ ಶರಾವತಿ ಸಂತ್ರಸ್ತರಿಗೆ & ಬಗರ್ ಹುಕುಂ ರೈತರಿಗೆ ಹಕ್ಕುಪತ್ರ ಕೊಡಿಸುವಲ್ಲಿ ವಿಫಲ-ಮಧು ಬಂಗಾರಪ್ಪ
Date: