Monday, February 2, 2026
Monday, February 2, 2026

D. K. Shivakumar ಕಾಂಗ್ರೆಸ್ ಪಕ್ಷದ ಭಾಗವಾಗಲು ದೀಪಕ್ ತಿಮ್ಮಯ್ಯನವರಿಗೆ ಮನವಿ ಮಾಡಿದ್ದೆ.ಪಕ್ಷದಿಂದ ಅವರಿಗೆ ಸ್ವಾಗತ- ಡಿ.ಕೆ.ಶಿವಕುಮಾರ್

Date:

D. K. Shivakumar ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಸದಾಶಿವನಗರ ನಿವಾಸದಲ್ಲಿ ದೀಪಕ್ ತಿಮ್ಮಯ್ಯ ಪಕ್ಷಕ್ಕೆ ಬರಮಾಡಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, “ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.

D. K. Shivakumar ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ, ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...