Thursday, March 19, 2026
Thursday, March 19, 2026

Bharat Scout and Guides ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ಮಹಾನಾಯಕ ಅಂಬೇಡ್ಕರ್-ಶಕುಂತಲಾ ಚಂದ್ರಶೇಖರ್

Date:

Bharat Scout and Guides ಭಾರತದಲ್ಲಿನ ಬಹುತ್ವವುಳ್ಳ ಸಮಾಜದಲ್ಲಿ ಹೆಚ್ಚಿನವರು ಎಲ್ಲ ಕ್ಷೇತ್ರಗಳಲ್ಲಿ ಅಸಮಾನತೆಯಿಂದ ಬಳಲುತ್ತಿದ್ದರು. ಇಂತಹ ಕಾಲಘಟ್ಟದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದತ ಶ್ರೇಷ್ಠ ಗ್ರಂಥವನ್ನು ರಚಿಸಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ಮಹಾನ್ ನಾಯಕ ಎಂದು ಭಾರತ ಸ್ಕೌಟ್ ಅಂಡ್ ಗೈಡ್ಸ್ ನ ಜಿಲ್ಲಾ ಗೈಡ್ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್133ನೇ ಜಯಂತಿ ಅಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಸಂವಿಧಾನ ವ್ಯವಸ್ಥೆಯಿಂದ ಎಲ್ಲರಿಗೂ ಅವಕಾಶ ಸಿಗುತ್ತಿದ್ದು, ಉತ್ತಮ ಸಮಾಜ ರೂಪುಗೊಳ್ಳುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತು ಹೆಚ್ಚಿನ ಅಧ್ಯಯನ ನಡೆಸಬೇಕು. ಅವರ ಕೃತಿಗಳನ್ನು ಯುವಜನತೆ ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.
ಅಂಬೇಡ್ಕರ್ ಅವರು ಶೋಷಿತ ವರ್ಗದ ಧ್ವನಿಯಾಗಿದ್ದರು. ಲಂಡನ್‌ನಲ್ಲಿ ಅಧ್ಯಯನ ನಡೆಸಿದ ಅವರು ನಂತರ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡರು. ಸಮಸಮಾಜದ ಕನಸು ಕಂಡAತಹ ಅಂಬೇಡ್ಕರ್ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದರು ಎಂದು ಹೇಳಿದರು.
Bharat Scout and Guides ಸ್ಕೌಟ್ ಆಯ್ತ್ರಾದ ಕೆಪಿ ಬಿಂದು ಕುಮಾರ್ ಅವರು ಮಾತನಾಡುತ್ತಾ. ಎಲ್ಲಾ ದೇಶದ ಸಂವಿದಾನ ಕ್ಕಿಂತ ನಮ್ಮ ದೇಶದ ಸಂವಿಧಾನ ತುಂಬಾ ವಿಶೇಷವಾದದ್ದು ಅಂಬೇಡ್ಕರ್ ಅವರ ತತ್ವ ಆದರ್ಶ ಗುಣಗಳು ಹಾಗೂ ಆಡಳಿತಾತ್ಮಕ ಧೋರಣೆಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ನುಡಿದರು. ಇದೇ ಸಂಬಂಧದಲ್ಲಿ ಮಕ್ಕಳಿಂದ ಸ್ಕೌಟ್ ಪ್ರಾರ್ಥನೆ ನೆರವೇರಿತು ಕಾರ್ಯಕ್ರಮದಲ್ಲಿ. ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಶ್ರೀಮತಿ ಭಾರತಿ ಡಯಾಸ್. ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ.ವಿಜಯ್‌ಕುಮಾರ್, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರಾಜೇಶ್ ಅವಲಕ್ಕಿ. ಖಜಾಂಚಿ ದೀಪು ಪಿ ಎಸ್. ಹಿರಿಯ ಗೈಡರ್ಸ್. ಶ್ರೀಮತಿ ಹೇಮಲತಾ. ಮೀನಾಕ್ಷಮ್ಮ. ಜಯಮ್ಮ. ದಾಕ್ಷಾಯಿಣಿ. ಹಿರಿಯ ಸ್ಕೌಟ್ ಮಾಸ್ಟರ್. ರಾಜಕುಮಾರ್. ಹಿರಿಯ ಸ್ಕೌಟರ್ಸ್.. ಚಂದ್ರಶೇಖರಯ್ಯ. ಎನ್ ಆರ್ ಚಂದ್ರಶೇಖರ್. ಮಲ್ಲಿಕಾರ್ಜುನ್ ಖಾನೂರ್. ಜಿಲ್ಲಾ ಸಂಸ್ಥೆಯ ಕೇಂದ್ರ ಕಚೇರಿಯ ಸಿಬ್ಬಂದಿಗಳು. ವಿವಿಧ ಶಾಲೆಯ ಸ್ಕೌಟ್ ಕ್ಲಬ್ ಗೈಡ್ ಬುಲ್ ಬುಲ್. ರೋವರ್ಸ್ ರೆಂಜರ್ಸ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...