Wednesday, September 16, 2026
Wednesday, September 16, 2026

RSS ಆರ್ ಎಸ್ಎಸ್ ಕಟ್ಟಾಳು ಜಗಳೂರು ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ

Date:

RSS ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ದೊಡ್ಡದಿತ್ತು. ಈ ಮಧ್ಯೆ ಸಂಸದ ಸಿದ್ದೇಶ್ವರ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದರಿಂದ ಬೇಸರಗೊಂಡಿರುವ ದಾವಣಗೆರೆ ಜಗಳೂರು ಕ್ಷೇತ್ರದ ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ ಗುರುಸಿದ್ದನಗೌಡ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.
ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಅವರು, ಮಾಜಿ ಶಾಸಕ ಟಿ.ಗುರುಸಿದ್ದ‌ನಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಂಡರು. ಇದೇ ವೇಳೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಟಿ.ಗುರುಸಿದ್ದನಗೌಡ ಪುತ್ರ ಡಾ.ರವಿಕುಮಾರ್‌ ಸಹ ಕಾಂಗ್ರೆಸ್ ಸೇರಿದ್ದಾರೆ.
RSS ಗುರುಸಿದ್ದನಗೌಡ-ಎಸ್ಎಸ್ ಮಲ್ಲಿಕಾರ್ಜುನ್
ಹಾಸನದಲ್ಲಿ ಮುಗಿಯದ ಬೇಗುದಿ: ಪ್ರೀತಂ ಗೌಡರನ್ನು ಟೀಕಿಸಿದ್ದ ಬಿಜೆಪಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿತ!
ನಂತರ ಮಾತನಾಡಿದ ಟಿ ಗುರುಸಿದ್ದನಗೌಡ ಅವರು, ನಾವು ಪಕ್ಷಕ್ಕಾಗಿ ನಿರಂತರವಾಗಿ ದುಡಿದಿದ್ದೇವೆ. ಆದರೆ ನಮಗೆ ಪಕ್ಷದಿಂದ ಅನ್ಯಾಯವಾಗಿದೆ. 20 ವರ್ಷಗಳಿಂದ ಸಂಸದರಾಗಿರುವ ಸಿದ್ದೇಶ್ವರ ಅವರು ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಬೇಕಿತ್ತು. ಈ ಬಾರಿ ನನ್ನ ಪುತ್ರ ಡಾ‌.ರವಿಕುಮಾರ್​ಗೆ ಬಿಜೆಪಿ ಟಿಕೆಟ್​ ಕೊಡಬೇಕಿತ್ತು. ಸಿದ್ದೇಶ್ವರಗೆ ವಯಸ್ಸಾಗಿದೆ. ಹೀಗಾಗಿ ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಬಿಜೆಪಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕಿಡಿಕಾರಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...