Monday, February 2, 2026
Monday, February 2, 2026

H.D.Kumarswamy ಗ್ಯಾರಂಟಿ ಜಾಹೀರಾತಿಗೆ ರಾಜ್ಯ ಸರ್ಕಾರ ₹300 ಕೋಟಿ ‌ಹಣ ಪೋಲು ಮಾಡಿದೆ- ಕುಮಾರಸ್ವಾಮಿ

Date:

H.D.Kumarswamy “ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ” ಎಂದು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ದಾರೆ.
ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ನೀಡುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.
ಜನರನ್ನು ಉದ್ದೇಶಿಸಿ ಮಾತನಾಡಿದ ಹೆಚ್‌ಡಿಕೆ “ಸ್ವಲ್ಪ ಗಮನ ಇಟ್ಟು ಎರಡು ಮಾತುಗಳನ್ನು ಕೇಳಿ. ಇವತ್ತಿನ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕೇನಾಗಬೇಕು ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ” ಎಂದು ಟೀಕಿಸಿದ್ದಾರೆ.

H.D.Kumarswamy ಬೆಳಗ್ಗೆ ಎದ್ದು ಯಾವ ಪತ್ರಿಕೆ ನೋಡಿದರೂ ಗ್ಯಾರಂಟಿಯದ್ದೇ ಜಾಹೀರಾತು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಫೋಟೋಗಳನ್ನು ಹಾಕಿಕೊಂಡು, ಈಗಾಗಲೇ ₹300 ಕೋಟಿಯಷ್ಟು ಹಣವನ್ನು ಜಾಹೀರಾತಿಗಾಗಿ ಖರ್ಚು ಮಾಡಿದ್ದಾರೆ. ಅದೆಲ್ಲವೂ ನಿಮ್ಮ ದುಡ್ಡು. ಈ ಹಣ ಕಾಂಗ್ರೆಸ್ ಕಚೇರಿಯಿಂದಲೋ ಅಥವಾ ಅವರ ಜೇಬಿನಿಂದ ಹಾಕಿರುವ ದುಡ್ಡಲ್ಲ. ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ದುಡ್ಡು ಕೊಟ್ಟಿಲ್ಲ ಎಂದು ದೂರುತ್ತಿದ್ದಾರೆ” ಎಂದಿದ್ದಾರೆ. ಈ ಮೂಲಕ ಬರ ಪರಿಹಾರ ನೀಡದ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...