Friday, March 20, 2026
Friday, March 20, 2026

B.Y.Vijayendra ನಾಮಪತ್ರ ಹಿಂಪಡೆಯಲು ಈಶ್ವರಪ್ಪನವರಿಗೆ ಬಿಜೆಪಿಯು ಏಪ್ರಿಲ್ 22 ಗಡುವು ನೀಡಿದೆ- ಬಿ.ವೈ.ವಿಜಯೇಂದ್ರ

Date:

B.Y.Vijayendra ನಾಮಪತ್ರ ಹಿಂಪಡೆಯಲು ಈಶ್ವರಪ್ಪನವರಿಗೆ ಬಿಜೆಪಿಯು ಏಪ್ರಿಲ್ 22 ಗಡುವು ನೀಡಿದೆ- ಬಿ.ವೈ.ವಿಜಯೇಂದ್ರ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ತಮ್ಮ ಪುತ್ರ ಕೆಇ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಪಣತೊಟ್ಟಿರುವ ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಕೆ ಮಾಡಿದ್ದರು.

ಇದರ ಬೆನ್ನಲ್ಲೇ ಬಿವೈ ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ.

ಈ ಹಿಂದೆ ಈಶ್ವರಪ್ಪರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪರ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ ನಂತರ ನಾನು ಶಿವಮೊಗ್ಗದಿಂದ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಹಠ ತೊಟ್ಟಿದ್ದಾರೆ.

B.Y.Vijayendra ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ.

ಈ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...