Tuesday, October 1, 2024
Tuesday, October 1, 2024

Voting awareness ಮತದಾನ ಜಾಗೃತಿ ಅಭಿಯಾನದಲ್ಲಿ ಸಾರ್ವಜನಿಕರೆಲ್ಲ ಪಾಲ್ಗೊಳ್ಳಿರಿ : ಸ್ನೇಹಲ್ ಸುಧಾಕರ ಲೋಖಂಡೆ

Date:

Voting awareness ಪ್ರತಿ ಮತಗಟ್ಟೆಗಳಲ್ಲಿ ಹಾಗೂ ಕಳೆದ ಬಾರಿ ಕಡಿಮೆ ಮತದಾನವಾದ ಕಡೆಗಳಲ್ಲಿ ಮತದಾನದ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದ್ದು, ಎಲ್ಲ ಸಾರ್ವಜನಿಕರು ಮತದಾನ ಜಾಗೃತಿ ಮತ್ತು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಕರೆ ನೀಡಿದರು.

ಏ.15 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾನ ಜಾಗೃತಿ ಅಭಿಯಾನದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಕುರಿತು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು, ಪಿಡಿಓ, ಬಿಲ್‍ಓ ಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಗ್ರಾ.ಪಂ ಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿ ದಿನ ವಿವಿಧ ರೀತಿಯಲ್ಲಿ, ವಿನೂತನವಾಗಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಏ.19 ಮತ್ತು 28 ರಂದು ಎಲ್ಲ ಮತಗಟ್ಟೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ವಿವಿಧ ವಿನೂತನ ಕಾರ್ಯಕ್ರಮಗಳ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವನ್ನು ಮಾಡಲಾಗುತ್ತಿದ್ದು ಸಾರ್ವಜನಿಕರೆಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಬಿಎಲ್‍ಓ ಗಳು, ಪಿಡಿಒ, ಮತದಾರರ ವೇದಿಕೆಗಳು, ವಿವಿಧ ಸಂಘ ಸಂಸ್ಥೆಗಳವರು ಮತದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸಿ-ವಿಜಿಲ್ ಆ್ಯಪ್ ಬಳಕೆ ಬಗ್ಗೆ ಹಾಗೂ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ನೈತಿಕ ಚುನಾವಣೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕೆಂದರು.

ಸಾರ್ವಜನಿಕರು ಸಹ ಮತದಾನದ ಜಾಗೃತಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಚುನಾವಣಾ ಅಕ್ರಮಗಳು, ಅವ್ಯವಹಾರಗಳು ಕಂಡುಬಂದಲ್ಲಿ ತಮ್ಮ ಮೊಬೈಲ್ ನಲ್ಲಿ ಸಿ-ವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ದೂರು ನೀಡಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು.

Voting awareness ಜಿಲ್ಲಾ ಸ್ವೀಪ್ ಸಮಿತಿಯಿಂದ ಸಾರ್ವಜನಿಕರನ್ನು ಮತದಾನದೆಡೆ ಪ್ರೇರೇಪಿಸುವಂತಹ ವಿವಿಧ ಚಟುವಟಿಕೆ ಮತ್ತು ಕಾರ್ಯಕ್ರಮಗಳನ್ನು ನಡೆಸಿ ಮತದಾನ ಮಾಡುವಂತೆ ಮನವಿ ಮಾಡಲಾಗುತ್ತಿದೆ. ಸಾರ್ವಜನಿಜರು, ಎನ್‍ಜಿಓ, ಬಿಎಲ್‍ಓ ಗಳು ಸೇರಿದಂತೆ ಎಲ್ಲರೂ ಸ್ವೀಪ್ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸಬೇಕು. ಎಲ್ಲರೂ ನೈತಿಕ ಚುನಾವಣೆಗೆ ಕೈಜೋಡಿಸಬೇಕು ಹಾಗೂ ಚುನಾವಣಾ ಹಬ್ಬದಲ್ಲಿ ಪಾಲ್ಗೊಳ್ಳಬೇಕೆಂದರು.

ಜಿ.ಪಂ ಸಿಪಿಓ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಕಡಿಮೆ ಮತದಾನ ಆಗುವ ಮತಗಟ್ಟೆಗಳು, ನಗರ ಭಾಗದಲ್ಲಿ ಸ್ಲಂ ಪ್ರದೇಶಗಳು, ಇತರೆಡೆ ಮತದಾನ ಪ್ರಮಾಣ ಹೆಚ್ಚಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮದ್ಯ, ಹೆಂಡ, ಹಣ ಇತರೆ ಆಮಿಷ ತೋರಿಸುವುದು, ಹೆದರಿಸಿ, ಬೆದರಿಸಿ ಮತ ಕೇಳುವುದು, ಕೋಮು ದ್ವೇಷ ಬಿತ್ತುವುದು, ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು ಸೇರಿದಂತೆ ಯಾವುದೇ ರೀತಿಯ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ಸಾರ್ವಜನಿಕರು ಸಿ-ವಿಜಿಲ್ ಮೂಲಕ ದೂರು ಸಲ್ಲಿಸಬಹುದು ಎಂದರು.

ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹ್ಮದ್ ಪರ್ವೇಜ್ ಮಾತನಾಡಿ, ಎಲ್ಲ ಬಿಎಲ್‍ಓ ಗಳು ಹಾಗೂ ಸಾರ್ವಜನಿಕರು ತಮ್ಮ ಮೊಬೈಲ್‍ನಲ್ಲಿ ಸಿ-ವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಚುನಾವಣಾ ಅಕ್ರಮಗಳ ಕುರಿತು ಆಡಿಯೋ, ವಿಡಿಯೋ, ಚಿತ್ರಗಳನ್ನು ಹಾಗೂ ದೂರನ್ನು ಸಲ್ಲಿಸಬಹುದು. ದೂರು ನೀಡಿದ 90 ನಿಮಿಷದೊಳಗೆ ಎಫ್‍ಎಸ್‍ಟಿ, ಎಸ್‍ಎಸ್‍ಟಿ ತಂಡಗಳು ಕ್ರಮ ಕೈಗೊಳ್ಳಲಿದ್ದು, ದೂರುದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಸಿ-ವಿಜಿಲ್ ಅಲ್ಲದೇ 1950 ಸಂಖ್ಯೆಗೆ ಕರೆ ಮಾಡಿ ಸಹ ದೂರುಗಳನ್ನು ಸಲ್ಲಿಸಬಹುದು ಎಂದರು.

ಜಾಗೃತ ಮತದಾರರ ವೇದಿಕೆ ಅಧ್ಯಕ್ಷ ಕೆ.ಸಿ.ಬಸವರಾಜಪ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಬಿಎಲ್‍ಓ, ಪಿಡಿಓ ಗಳು ಪರಿಣಾಮಕಾರಿ ಮತದಾನ ಜಾಗೃತಿ ಕಾರ್ಯಕ್ರಮಗಳ ಕುರಿತು ಸಲಹೆ, ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳು, ಬಿಎಲ್‍ಓ ಗಳು, ಪಿಡಿಓ, ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...