Thursday, March 19, 2026
Thursday, March 19, 2026

DC Shivamogga ಭದ್ರಾವತಿಯಲ್ಲಿ ಈ ಬಾರಿ ಮತದಾನ ಪ್ರಮಾಣ ಹೆಚ್ಚಾಗಬೇಕು- ಸ್ನೇಹಲ್ ಸುಧಾಕರ್ ಲೋಖಂಡೆ

Date:

DC Shivamogga ಭದ್ರಾವತಿಯಲ್ಲಿ ಬೃಹತ್ ಸಂಖ್ಯೆಯಲ್ಲಿ ಗೃಹ ರಕ್ಷಕ ದಳ, ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಎನ್.ಸಿ.ಸಿ., ಎನ್.ಎಸ್.ಎಸ್. ವಿದ್ಯಾರ್ಥಿಗಳು ಸೇರಿ ವಿಎಸ್ ಎಲ್ ಗೇಟ್ ನಿಂದ ಪೆರೇಡ್ ನಲ್ಲಿ ಸಾಗಿ, ಕನಕಬಮಂಟಪದಲ್ಲಿ ಸ್ವೀಪ್, ಮೇ 7 ಆಕಾರದಲ್ಲಿ ಚಿತ್ತಾರ ಮೂಡಿಸಿ, ಅತ್ಯಾಕರ್ಷಕವಾಗಿ
ಮೊಬೈಲ್ ಟಾರ್ಚ್ ಗಳನ್ನು ಆಕಾಶಕ್ಕೆ ತೋರಿಸುತ್ತಾ ಸ್ವೀಪ್ ಆಕೃತಿ ಮೂಡಿಸಿ ಎಲ್ಲರ ಗಮನ ಸೆಳೆಯುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.

ಈ ವೇಳೆ ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಚುನಾವಣೆ ದೊಡ್ಡ ಪರ್ವ. ಮತದಾನ ನಮ್ಮೆಲ್ಲರ ಹಕ್ಕು.ತಾವು ಮತದಾನ ಮಾಡಿ ಅಕ್ಕಪಕ್ಕದವರೂ ಮತದಾನ ಮಾಡುವಂತೆ ತಿಳಿಸಬೇಕು. ಶೇ.೧೦೦ ರಷ್ಟು ಮತದಾನ ಮಾಡುವಂತೆ ಮನವಿ ಮಾಡಿದರು.

ಭದ್ರಾವತಿಯಲ್ಲಿ ಈ ಬಾರಿ ಮತದಾನದ ಪ್ರಮಾಣ ಹೆಚ್ಚಬೇಕು ಎಂದರು.
ಶಿವಮೊಗ್ಗ ಎಸಿ ಸತ್ಯನಾರಾಯಣ ಮಾತನಾಡಿ, ಆಸೆ, ಆಮಿಷಗಳಿಗೆ ಗುರಿಯಾಗದೆ, ನಿರ್ಭೀತವಾಗಿ ಮತದಾನ ಮಾಡುವ ಮೂಲಕ
ಸುಭದ್ರ ಪ್ರಜಾಪ್ರಭುತ್ವ ರೂಪಿಸಲು ಅನುವುಮಾಡಿಜೊಡಬೇಕು ಎಂದರು.

ಜಿ.ಪಂ. ಸಿಪಿಒ ಗಾಯತ್ರಿ ಮತದಾನ ನಮ್ಮೆಲ್ಲರ ಸಮಾನ ಹಕ್ಕು ಮತದಾನ ಮಾಡಲು ಮರಿಯಬೇಡಿ ಎಂದರು. ನಾವು ಶಿವಮೊಗ್ಗ ಭದ್ರಾವತಿ ಜನ
ಮಾಡೇ ಮಾಡ್ತಿವಿ ಮತದಾನ ಎಂಬ ಘೋಷಣೆ ಕೂಗಿದರು.

DC Shivamogga ಚುನಾವಣಾ ಪರ್ವ ದೇಶದ ಗರ್ವ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಎಲ್ಲರನ್ನು ಮತದಾನ ಮಾಡಲು ಪ್ರೇರೇಪಿಸಿದರು.

ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹ್ಮದ್ ಪರ್ವೀಜ್ ಮತದಾನ ಪ್ರತಿಜ್ಞಾವಿಧಿ ಬೋಧಿಸಿದರು.
ಚುನಾವಣೆ ಗೀತೆ ಗಾಯನ ಮಾಡಲಾಯಿತು.

ಗೃಹ ರಕ್ಷಕ ದಳದ ಕಮಾಂಡೆಂಟ್ ಡಾ.ಚೇತನ್, ಭದ್ರಾವತಿ ಇಓ ಗಂಗಣ್ಣ, ನಗರಸಭೆ ಆಯುಕ್ತರಾದ ಚನ್ನಪ್ಪ, ಸುಹಾಸಿನಿ, ಬಿಇಓ, ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...