Wednesday, April 8, 2026
Wednesday, April 8, 2026

DC Shivamogga ಯಾವುದೇ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡಿ- ಗುರುದತ್ತ ಹೆಗ್ಗಡೆ

Date:

DC Shivamogga ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಮತದಾರರು ಸಕ್ರಿಯವಾಗಿ ಮತದಾನ ಹಬ್ಬದಲ್ಲಿ ಭಾಗವಹಿಸಿ, ಯಾವುದೇ ಆಮಿಷಗಳಿಗೆ ಒಳಗಾಗದೇ ನೈತಿಕ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತದಾರರಿಗೆ ಕರೆ ನೀಡಿದರು.

ಶಿವಮೊಗ್ಗ ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರ ವ್ಯಾಪ್ತಿಯಲ್ಲಿ ಮತದಾನ ಮಾಡಲು ಜನರು ನಿರಾಸಕ್ತಿ ತೋರುತ್ತಿದ್ದು, ಈ ಬಾರಿ ಹಾಗಾಗದೇ ಎಲ್ಲರೂ ಸಕ್ರಿಯವಾಗಿ ಮತದಾನ ಮಾಡಬೇಕು. ಹಾಗೂ ಮತ ಹಾಕಲು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡೋಣ ಎಂದರು.

DC Shivamogga ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಶಿವಮೊಗ್ಗದಲ್ಲಿ ಶೇ.100 ರಷ್ಟು ಮತದಾನ ಮಾಡಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಯಾರು ಕೂಡ ಮತದಾನದಿಂದ ವಂಚಿತರಾಗುವುದು ಬೇಡವೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಳಾದ ಸಿ ಎಸ್ ಗಾಯತ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಮಂಜುನಾಥ್, ಜಾಗೃತ ಮತದಾರರ ವೇದಿಕೆಯ ಕೆ.ಸಿ. ಬಸವರಾಜ್ ಹಾಗೂ ಪದಾಧಿಕಾರಿಗಳು, ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೇಜ್, ಸಾರ್ವಜನಿಕರು, ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಐಪಿಎಲ್ ಕ್ರಿಕೆಟ್ ಪಾಸ್ ನನಗೆ ಬೇಡ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಾಸಕರಿಗೆ ನೀಡಲಾಗುವ ನನ್ನ ಹೆಸರಿನ ಐಪಿಎಲ್ ಕ್ರಿಕೆಟ್...

Sri Kala Skill Development Centre ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾ. ಎಂ.ಲಿಂಗಪ್ಪ ಸ್ಮಾರಕ ಪ್ರಶಸ್ತಿ ಘೋಷಣೆ

Sri Kala Skill Development Centre ಶಿವಮೊಗ್ಗ ನಗರದಲ್ಲಿ ಪತ್ರಕರ್ತರಾಗಿ, ಸಮಾಜಮುಖಿ...

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...