Saturday, December 6, 2025
Saturday, December 6, 2025

Breaking News ಪ್ರೀತಿಸುವಂತೆ ಕಿರುಕುಳ,ನಿರಾಕರಿಸಿದ ಯುವತಿಯನ್ನ ಕೊಲೆ ಮಾಡಿದ ಯುವಕ

Date:

Breaking News ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ 24ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಯುವಕನೋರ್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ.

ಸಂತ್ರಸ್ತೆ ನೇಹಾ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನಿರಂಜನ ಹಿರೇಮಠ ಪುತ್ರಿ ಎಂದು ತಿಳಿದುಬಂದಿದೆ.

ಕೊಲೆಯ ನಂತರ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ಫಯಾಜ್ ಎಂಬಾತನನ್ನು ಬೆಳಗಾವಿ ಜಿಲ್ಲೆಯ ಸೌದತ್ತಿಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಸಂತ್ರಸ್ತೆಯ ಸೀನಿಯರ್ ಕಾಲೇಜಿನಲ್ಲಿಯೇ ಓದುತ್ತಿದ್ದನು. ಕೊಲೆಯ ನಂತರ ಆರೋಪಿ ಕೈಯಲ್ಲಿ ಚಾಕು ಹಿಡಿದು ಸ್ಥಳದಿಂದ ತೆರಳಿದ್ದಾರೆ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ನೇಹಾಳನ್ನು ಸಹಪಾಠಿಗಳು ಮತ್ತು ಅಧ್ಯಾಪಕರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ದುಃಖತಪ್ತ ಪೋಷಕರಿಗೆ ಸಾಂತ್ವನ ಹೇಳಿದರು.

Breaking News ನೇಹಾ ಬಿವಿಬಿಯಲ್ಲಿ ಎಂಸಿಎ 1ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಲವು ತಿಂಗಳಿಂದ ಆರೋಪಿ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನು. ಇತ್ತೀಚೆಗೆ ಆಕೆಗೆ ಪ್ರಪೋಸ್ ಮಾಡಿದ್ದನ್ನು ಸಂತ್ರಸ್ತೆ ತಿರಸ್ಕರಿಸಿದ್ದಳು. ಆಕೆಯ ನಡೆಯಿಂದ ಕುಪಿತಗೊಂಡ ಆರೋಪಿ ನೇಹಾಳನ್ನು ಕೊಲೆ ಮಾಡಲು ಮುಂದಾಗಿದ್ದ. ತನ್ನ ಪ್ರಸ್ತಾಪವನ್ನು ತಿರಸ್ಕರಿಸಿದ ಹುಡುಗಿಯನ್ನು ಕೊಲೆ ಮಾಡುವುದಾಗಿ ಆರೋಪಿ ತನ್ನ ಸ್ನೇಹಿತರ ಬಳಿ ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...