Friday, June 20, 2025
Friday, June 20, 2025

Geeta Shivaraj kumar ಪ್ರತೀ ವಿಧಾನ ಸಭಾಕ್ಷೇತ್ರದಲ್ಲಿ ಸು.60.000 ಮಂದಿ ಗ್ಯಾರಂಟಿ ಫಲಾನುಭವಿಗಳಿದ್ದಾರೆ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ರಾಜ್ಯದಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು ಬರಗಾಲ ಮತ್ತು ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜನಸಾಮಾನ್ಯರ ಕೈಹಿಡಿದಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅಭಿಪ್ರಾಯಪಟ್ಟರು.

ಶಿವಮೊಗ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಗೆರೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ಕುಟುಂಬ ನಿರ್ವಹಣೆ ಭತ್ಯೆ ಸೇರಿದಂತೆ, ಅನೇಕ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ ಎಂದರು.

Geeta Shivaraj kumar ಗ್ಯಾರಂಟಿ ಯೋಜನೆಗಳು ಶೇ 100ರಷ್ಟು ನಮ್ಮ ಕೈಹಿಡಿಯಲಿವೆ. ಇವುಗಳಿಂದ ಬಿಜೆಪಿಯವರು ಸೇರಿದಂತೆ ಎಲ್ಲ ವರ್ಗದ ಜನರಿಗೂ ಅನುಕೂಲ ಆಗಿದ್ದು, ಆರ್ಥಿಕ ಶಕ್ತಿ ಸಿಕ್ಕಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ 60ಸಾವಿರ ಕುಟುಂಬಗಳು ಒಂದಿಲ್ಲೊಂದು ಯೋಜನೆಯ ಫಲಾನುಭವಿಗಳಾಗಿವೆ. ಫಲಾನುಭವಿಗಳೆಲ್ಲರಿಗೂ ಕಾಂಗ್ರೆಸ್ ಬಗ್ಗೆ ಕೃತಜ್ಞತೆ ಇರುವುದು ನನಗೆ ಶ್ರೀರಕ್ಷೆಯಾಗಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಜೂ.21 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ...

MESCOM ಭದ್ರಾವತಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಭದ್ರಾವತಿ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಜೂ. 23...