Friday, July 10, 2026
Friday, July 10, 2026

Congress Guarantee Scheme ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಈ ಬಾರಿ ಶಿವಮೊಗ್ಗ ಲೋಕಸಭಾ ಚುನಾವಣಾ ಅಭ್ಯರ್ಥಿಗೆ ಗೆಲುವು ತರಲಿದೆ

Date:

Congress Guarantee Scheme ಗಿಡವನ್ನು ಗೊಬ್ಬರ ನೀರು ಹಾಕಿ ಪೋಷಿಸುವಂತೆ ಕಾಂಗ್ರೆಸ್ ಸರ್ಕಾರ ಬಡವರನ್ನು, ದೀನದಲಿತರನ್ನು, ಹಿಂದುಳಿದ ವರ್ಗದವರನ್ನು, ಪರಿಶಿಷ್ಟರನ್ನು, ನೋಂದವರನ್ನು ಹಾಗೂ ಸಮಾಜದ ಎಲ್ಲರನ್ನೂ ಕಾಪಾಡುವ ಕೆಲಸ ಮಾಡುತ್ತಿದೆ. ಅದರಿಂದ ಪಸಲು ಅಂದರೆ ಲಾಭ ಖಂಡಿತ ಆಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಡಿಸಿ ಜಗದೀಶ್ವರ್ ತಿಳಿಸಿದರು.

ಅವರು ಪತ್ರಿಕಾ ಹೇಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ರೂಪದಲ್ಲಿ ನೊಂದವರಿಗೆ ನೆರವಾಗಿರುವುದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಅನುಕೂಲ ಪಡೆದವರು ನಿಜಕ್ಕೂ ಪಕ್ಷಕ್ಕೆ ಒಳಿತನ್ನು ಮಾಡುತ್ತಾರೆ ಎಂಬ ನಂಬಿಕೆ ನಿರೀಕ್ಷೆ ನಮಗಿದೆ, ನಿರೀಕ್ಷೆ ಸೋತರೆ, ನೀರು ಗೊಬ್ಬರ ಅತ್ಯಗತ್ಯವಾಗುತ್ತದೆಯೇ ಎಂದು ಪ್ರಶ್ನಿಸಿದರು.

Congress Guarantee Scheme ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ನಾಮಪತ್ರ ಸಲ್ಲಿಸುವಾಗ ಸೇರಿದ್ದ ಬಾರಿ ಪ್ರಮಾಣದ ಮತದಾರರ ಭವ್ಯ ಮೆರವಣಿಗೆಯನ್ನು ಕಂಡ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗೆ ಆತಂಕ ತಂದಿದೆ. ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಸಾಕಷ್ಟು ಬೆಂಬಲ ವ್ಯಕ್ತವಾಗಿದ್ದು, ಕಾಂಗ್ರೆಸ್ ಜಿಲ್ಲೆಯಲ್ಲಿ ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...