Monday, February 2, 2026
Monday, February 2, 2026

B.Y.Vijayendra ಗ್ಯಾರಂಟಿ ಯೋಜನೆ ಟೀಕಿಸಿದ ವಿಜಯೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಂದ ದೂರು

Date:

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಎಂಬ ಐದು ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಹೇಳಿರುವುದಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್ ಆರೋಪಿಸಿದೆ.

B.Y.Vijayendra ಐದು ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಮತ್ತು ಕರ್ನಾಟಕದಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸದಿದ್ದರೆ, ಲೋಕಸಭೆ ಚುನಾವಣೆಯ ನಂತರ ಐದು ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆ. ಅಲ್ಲದೆ ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ ಎಂದು ಕೆಪಿಸಿಸಿ ಪತ್ರದಲ್ಲಿ ಆರೋಪಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...