Friday, May 15, 2026
Friday, May 15, 2026

Lok Sabha Election ಮತದಾನ ದಿನಾಂಕಗಳಾದ ಏಪ್ರಿಲ್ 26 & ಮೇ 7ರಂದು ಮತದಾರರು ಪ್ರವಾಸ ಕೈಗೊಳ್ಳದೇ ಮತ ಚಲಾಯಿಸಲು ಮನವಿ

Date:

Lok Sabha Election ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನವಿದ್ದು ಎಪ್ರೀಲ್ 26 ಹಾಗೂ ಮೇ 7 ಕ್ಕೆ ಪ್ರವಾಸ ಕೈಗೊಳ್ಳದೇ ಕಡ್ಡಾಯವಾಗಿ ಮತದಾನ ಮಾಡಲು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಸಕ್ರೈಬೆಲು ಆನೆ ಬಿಡಾರದಲ್ಲಿ ಆಗಮಿಸಿದ ಪ್ರವಾಸಿಗರಿಗೆ ಮನವಿ ಮಾಡಿಕೊಂಡರು.
ಮತದಾನದ ದಿನದಂದು ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿ ಗ್ರಾಮ ಪಂಚಾಯಿತಿ ಗಾಜನೂರು ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
Lok Sabha Election ಈ ಸಂದರ್ಭದಲ್ಲಿ ಭಾಗವಹಿಸಿದ ಮತದಾರರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಸಿ ಎಸ್ ಗಾಯತ್ರಿ ಅವರು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.
ಮತದಾನ ನಮ್ಮ ನಿಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಹಕ್ಕನ್ನು ತಪ್ಪದೆ ಚಲಾಯಿಸಿ ಜವಾಬ್ದಾರಿಯುತ ಪ್ರಜೆಯಾಗೋಣ ಎಂದು
ಜಿಲ್ಲಾ ಸ್ವೀಪ್ ರಾಯಭಾರಿಗಳಾದ ಡಾ ಕೆ ಎಸ್ ಶುಭ್ರತಾರವರು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ SLMT ನವೀದ್ ಅಹಮದ್ ಪವ್ರಿಜ್, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...