Tuesday, May 26, 2026
Tuesday, May 26, 2026

Code of Conduct ಬಿಜೆಪಿ ರಾಜ್ಯ ಘಟಕಕ್ಕೆ ಸೇರಿದ್ದ ಕಾರಿಂದ ಕೋಟಿ ರೂ ಜಫ್ತಿ

Date:

Code of Conduct ಬಿಜೆಪಿ ರಾಜ್ಯ ಘಟಕಕ್ಕೆ ಸೇರಿದ್ದ ಕಾರಿಂದ ಕೋಟಿ ರೂ ಜಫ್ತಿ ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ 2 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿರುವ ಚುನಾವಣಾ ಅಕ್ರಮ ತಡೆ ತಂಡ, ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಲೋಕೇಶ್‌ ಅಂಬೆಕಲ್ಲು ಮತ್ತು ಇತರೆ ಇಬ್ಬರ ವಿರುದ್ಧ ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ.
ಕಾಟನ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ತನಿಖಾ ಠಾಣೆಯಲ್ಲಿ ಶನಿವಾರ ಸಂಜೆ ಕಾರು ತಪಾಸಣೆ ನಡೆಸಿದಾಗ ರೂ. 2 ಕೋಟಿ ನಗದು ಪತ್ತೆಯಾಗಿತ್ತು. ಅದು ಬಿಜೆಪಿ ರಾಜ್ಯ ಘಟಕದ ಕಚೇರಿಗೆ ಸೇರಿದ್ದು ಎಂಬುದಾಗಿ ಕಾರಿನಲ್ಲಿದ್ದವರು ದಾಖಲೆ ಒದಗಿಸಿದ್ದರು. ಬಳಿಕ ಚುನಾವಣಾಧಿಕಾರಿಗಳು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ನಗದನ್ನು ನೀಡಿ, ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದರು.
ಹಣವನ್ನು ಬ್ಯಾಂಕ್‌ನಿಂದ ನಗದೀಕರಿಸಿರುವ ದಾಖಲೆಗಳಿರುವ ಕಾರಣದಿಂದ ಆದಾಯ ತೆರಿಗೆ (ಐ.ಟಿ) ಕಾಯ್ದೆಯ ಉಲ್ಲಂಘನೆ ಆಗಿಲ್ಲ ಎಂದು ಐ.ಟಿ ಅಧಿಕಾರಿಗಳು ಚುನಾವಣಾಧಿಕಾರಿಗಳಿಗೆ ತಿಳಿಸಿದ್ದರು. ನಗದನ್ನೂ ವಾಪಸ್‌ ಚುನಾವಣಾಧಿಕಾರಿಗಳ ವಶಕ್ಕೆ ಮರಳಿಸಿದ್ದರು. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳನ್ನು ಉಲ್ಲಂಘಿಸಿ ನಗದು ಸಾಗಿಸುತ್ತಿದ್ದ ಆರೋಪದ ಮೇಲೆ ಇದೀಗ ನ್ಯಾಯಾಲಯದ Code of Conduct ಅನುಮತಿ ಪಡೆದು ಎಫ್‌ಐಆರ್‌ ದಾಖಲಿಸಿದ್ದಾರೆ.
ನಗದನ್ನು ಬ್ಯಾಂಕ್‌ನಿಂದ ಚೆಕ್‌ ಮೂಲಕ ಡ್ರಾ ಮಾಡಿದ್ದು, ಬಿಜೆಪಿ ಕಾರ್ಯಕರ್ತರಿಗೆ ನೀಡಲು ಕಳುಹಿಸಲಾಗುತ್ತಿದೆ ಎಂದು ಉಲ್ಲೇಖಿಸಿದ್ದ ಬಿಜೆಪಿ ರಾಜ್ಯ ಘಟಕದ ಕಾರ್ಯಾಲಯದ ಪತ್ರ ಕಾರಿನಲ್ಲಿತ್ತು. ಈ ಕುರಿತು ಐ.ಟಿ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಆದಾಯ ತೆರಿಗೆ ವಂಚನೆ ಆಗಿಲ್ಲ ಎಂಬುದು ಕಂಡುಬಂದಿತ್ತು’ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ...

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...