Thursday, March 19, 2026
Thursday, March 19, 2026

B.S.Yediyurappa ಚೊಂಬು ,ಗ್ಯಾರಂಟಿ ಅವಕ್ಕೆಲ್ಲ ಏನೂ ಅರ್ಥವಿಲ್ಲ- ಬಿ.ಎಸ್.ಯಡಿಯೂರಪ್ಪ

Date:

B.S.Yediyurappa ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವ ಬಗ್ಗೆ ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ಸವಾಲು ಎಸೆದಿದ್ದಾರೆ.

ಅವರು ಗೆಲ್ಲುವ ನಾಲ್ಕು ಲೋಕಸಭಾ ಕ್ಷೇತ್ರದ ಹೆಸರು ಹೇಳಲಿ ಹಾಗೂ ಅವರ ಮುಂದಿನ ಪ್ರಧಾನಿ ಯಾರು ಎಂದು ಹೇಳಲಿ ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ‌ ಅವರು ಕಾಂಗ್ರೆಸ್ ನಾಯಕರಾಗಿ ಅವರು ಸೋಲುತ್ತೇವೆ ಎಂದು ಹೇಳಲು ಬರುತ್ತದೆಯೇ ? ಕಾಂಗ್ರೆಸ್ ರಾಜ್ಯದಲ್ಲಿ 20 ಸ್ಥಾನ ಪಡೆಯುವ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ಆದರೆ ಅವರು ಗೆಲ್ಲುವ ಕ್ಷೇತ್ರಗಳ ಹೆಸರು ಹೇಳಲಿ. ಅವರ ಮುಂದಿನ ನಾಯಕ ಯಾರು ಎಂದು ಹೇಳಲಿ ಅವರ ನಾಯಕತ್ವದ ಗೊಂದಲದಲ್ಲಿದ್ದಾರೆ ಎಂದರು.

ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆ ಬಿಜೆಪಿಗೆ ಇದೆ. ಶಿವಮೊಗ್ಗದಲ್ಲಿ ರಾಘಣ್ಣ ಜನತೆ ಅಪೇಕ್ಷೆ ಪಟ್ಟ ನೂರಕ್ಕೆ 95 ರಷ್ಟುಅಭಿವೃದ್ಧಿ ಕಾರ್ಯಗಳ ಮಾಡಿದ್ದಾರೆ.

ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ರಾಘವೇಂದ್ರ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದರು.
ಮೋದಿಯವರ ಗಾಳಿ ಎಲ್ಲೆಡೆ ಹರಡಿದೆ ಮೋದಿ ಪರವಾದ ಅಲೆ ರಾಜ್ಯಾದ್ಯಂತ ಇದೆ. ಚೊಂಬು ಗ್ಯಾರೆಂಟಿ ವಿಚಾರ ಪ್ರತಿಕ್ರಿಯಿಸಿದ ಅವರು. ಇದಕ್ಕೆಲ್ಲ ಏನು ಅರ್ಥ ಇಲ್ಲ ಎಂದರು.

B.S.Yediyurappa ಈಶ್ವರಪ್ಪ ನಾಮಪತ್ರ ಹಿಂಪಡೆಯದ ವಿಚಾರ ಪ್ರತಿಕ್ರಿಯಿಸಿ
ನಾನ್ಯಾಕಪ್ಪ ಅದರ ಬಗ್ಗೆ ಪ್ರತಿಕ್ರಿಯೆ ನೀಡಲಿ ಎಂದು ಹೇಳಿದರು.

ನೇಹಾ ಹತ್ಯೆ ಪ್ರಕರಣ ಸಿಓಡಿ ತನಿಖೆಗೆ ವಹಿಸುವುದಾಗಿ ಘೋಷಿಸಿರುವ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ಸ್ವಾಗತಿಸುತ್ತೇನೆ. ಮೋದಿ ವಿರುದ್ಧ ಟೀಕೆ ಮಾಡಿದ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯರವರು ಹಗುರವಾಗಿ ಮಾತನಾಡಿದ್ದಾರೆ. ನಾನೇನು ಮಾತನಾಡಲು ಆಗುತ್ತೆ. ರಸ್ತೆಯಲ್ಲಿ ಹೋಗುವರೆಲ್ಲ ಮಾತನಾಡಿದರೆ ಮೋದಿ ಅವರ ಗೌರವ ಕಡಿಮೆಯಾಗುವುದಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...