Monday, December 15, 2025
Monday, December 15, 2025

Siddharamaih ಮೋದಿಯವರು ಇಷ್ಟು ಕೆಳಮಟ್ಟದಲ್ಲಿ ಮಾತಾಡಬಾರದಿತ್ತು- ಸಿದ್ಧರಾಮಯ್ಯ

Date:

Siddharamaih ಪ್ರಧಾನಿಯಾಗಿ ನರೇಂದ್ರ ಮೋದಿಯವರು ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು. ಹಿಂದೂಗಳ ಮಾಂಗಲ್ಯವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತರಿಕೆರೆಗೆ ಚುನಾವಣಾ ಪ್ರಚಾರ ಸಭೆಗೆ ತೆರಳುವ ಮುನ್ನ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ದೇಶದ ಪ್ರಧಾನಮಂತ್ರಿ ಇಂದಿನವರೆಗೆ ಹೇಳಿರುವುದನ್ನು ಅನುಷ್ಠಾನಕ್ಕೆ ತಂದಿಲ್ಲ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ, ೧೫ ಮೇ ಹಣಕಾಸು ಆಯೋಗದ ಶಿಫಾರಸ್ಸು, ಬರಗಾಲಕ್ಕೆ ಪರಿಹಾರ ಕೊಟ್ಟಿಲ್ಲ, ೧೫ ಲಕ್ಷ ಎಲ್ಲರ ಖಾತೆಗೆ ಬಂತೇ? ವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿಯಾಗಿದೆಯೇ? ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಅಚ್ಚೇ ದಿನ್ ಬಂದಿದೆಯೇ? ಎಂದು ಪ್ರಶ್ನಿಸಿದರು.
Siddharamaih ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಇರಬಾರದು, ಹಂಚಿಕೆಯಾಗಬೇಕೆAದು ಹೇಳಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಮಗೆ ನಂಬಿಕೆ ಇದೆ ಎಂದರು.
ನೇಹಾ ಹಿರೇಮಠ ಕೊಲೆ ಪ್ರಕರಣ ಸಿಒಡಿ ತನಿಖೆಗೆ ನೀಡಲಾಗಿದೆ. ಪ್ರಕರಣದ ತ್ವರಿತ ವಿಚಾರಣೆಯನ್ನು ವಿಶೇಷ ನ್ಯಾಯಾಲಯದ ಮೂಲಕ ನಡೆಸಿ ಕಾಲಮಿತಿಯಲ್ಲಿ ವಿಚಾರಣೆ ಪೂರ್ಣಗೊಳಿಸಲಾಗುವುದು. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ನೇಹಾ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಧಾರವಾಡದಲ್ಲಿ ಕಣಕ್ಕಿಳಿದಿರುವ ದಿಂಗಾಲೇಶ್ವರ ಸ್ವಾಮಿಜಿಗಳು ತಮ್ಮ ಉಮೇದುವಾರಿಕೆ ಹಿಂಪಡೆದು ಕಾಂಗ್ರೆಸ್ ಬೆಂಬಲಿಸಲು ಮನವಿ ಮಾಡಲಾಗುವುದು. ಅವರ ಮಠ ಜಾತ್ಯಾತೀತವಾಗಿದ್ದು ಅವರ ಬೆಂಬಲ ಅಗತ್ಯವಿದೆ. ಹೀಗಾಗಿ ತಮ್ಮ ಸ್ಪರ್ಧೆಯನ್ನು ಹಿಂಪಡೆದು ಅವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವAತೆ ಮನವಿ ಮಾಡುತ್ತೇವೆ ಎಂದು ಪ್ರಶ್ನೆಯೊದಂಕ್ಕೆ ಅವರು ಉತ್ತರಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪಾರಾಧ ಹೆಚ್ಚಾಗುತ್ತಿದೆ ಎಂದು ಬಿಜೆಪಿ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಮಾಡಿದ ಅರೋಪ ಸರಿಯಾದುದಲ್ಲ. ೨೦೨೨ ರಲ್ಲಿ ಹೋಲಿಸಿದರೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಅಪರಾಧಗಳು ಕಡಿಮೆಯಾಗಿದೆ. ೨೦೨೩ ರಲ್ಲಿ ೧೨೯೫ ಅಪರಾಧ ಪ್ರಕರಣಗಳು ನಡೆದಿದ್ದರೆ, ಅವರ ಕಾಲದಲ್ಲಿ ೨೦೨೨ ರಲ್ಲಿ ೧೩೭೦ ಪ್ರಕರಣಗಳು ನಡೆದಿದೆ ಎಂದgಲ್ಲದೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಯಡಿಯೂರಪ್ಪ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಪಕ್ಷ ೧೩೬ ಸ್ಥಾನಗಳನ್ನು ಗೆದ್ದಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಶಿವಮೊಗ್ಗವನ್ನೂ ಸೇರಿದಂತೆ ೨೦ ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷ ನಕಾರಾತ್ಮಕ ವಿಷಯಗಳನ್ನು ಅವಲಂಬಿಸದೇ, ಸದಾ ತನ್ನ ಶಕ್ತಿಯನ್ನು ಅವಲಂಬಿಸಿಯೇ ಚುನಾವಣೆಯನ್ನು ಗೆಲ್ಲುತ್ತೇವೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...