Saturday, December 6, 2025
Saturday, December 6, 2025

Kimmane Ratnakar ಮೋದಿ ಅವರು ತಮ್ಮ ಹೇಳಿಕೆ ನೀಡುವಾಗ ಚುನಾವಣಾ ನೀತಿ ಸಂಹಿತೆ ಪಾಲಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ದೂರು

Date:

Kimmane Ratnakar ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.
ತಮ್ಮ ಲೆಟರ್ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ ಲೇಖನವೊಂದನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ.
ದೂರಿನಲ್ಲಿ ಏನಿದೆ?:
ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಹೇಳಿಕೆ ಸಮುದಾಯಗಳ ಮಧ್ಯೆ ದ್ವೇಷ, ಕೋಮುಭಾವನೆ ಕೆರಳಿಸುವ ಹೇಳಿಕೆಯಾಗಿದ್ದು, ರಾಜ್ಯ ದೇಶದ ಶಾಂತಿ ಸುವ್ಯವಸ್ಥೆ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇಂತಹ ಪ್ರಚೋದನಕಾರಿ ಹೇಳಿಕೆಯು ಪ್ರಧಾನಿ ಮೋದಿಯವರ ಹತಾಶೆ ಹಾಗೂ ಸೋಲಿನ ಭಯದಿಂದ ಕೂಡಿದ ಪ್ರತಿಕ್ರಿಯೆ ಆದರೂ ಸಹ ಇದು ಹಿಂದೂ ಮಹಿಳೆಯರ ಭಾವನಾತ್ಮಕ ವಿಚಾರಗಳನ್ನು ಕೆರಳಿಸುವ ಆ ಮೂಲಕ ಧರ್ಮ ಧರ್ಮಗಳ ಮಧ್ಯೆ ದ್ವೇಷ ಹರಡುವ ಹೇಳಿಕೆ ಆಗಿದ್ದು, ಆ ಮೂಲಕ ಮತ ಗಳಿಸುವ ವ್ಯವಸ್ಥಿತ ಒಳಸಂಚಾಗಿದೆ ಎಂದಿದ್ದಾರೆ.
Kimmane Ratnakar ಹೀಗಾಗಿ ಪತ್ರಿಕೆ ಸಂಪಾದಕ ಹಾಗೂ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಹಾಗೂ ದ್ವೇಷ ಹರಡುವ ಪಿತೂರಿ ಕುರಿತಂತೆ ತಕ್ಷಣ ಕ್ರಮ ಜರುಗಿಸಬೇಕೆಂದಿರುವ ಅವರು, ದೂರಿನ ಜೊತೆ ಹೇಳಿಕೆ ಪ್ರಕಟವಾಗಿರುವ ಪತ್ರಿಕೆಯ ಸಂಚಿಕೆಯನ್ನು ಲಗತ್ತಿಸಿದ್ದಾರೆ.
ಈ ಹೇಳಿಕೆಯು ಸಂವಿಧಾನ ವಿರೋಧಿ ಹೇಳಿಕೆಯಾಗಿದ್ದು, ಪ್ರಧಾನಿಯವರ ಗೌಪ್ಯ ಪ್ರಮಾಣವಚನ ಮತ್ತು ಸಂಸತ್ ಸದಸ್ಯರ ಪ್ರಮಾಣವಚನಕ್ಕೆ ವಿರೋಧವಾಗಿದೆ. ಭಾರತೀಯ ದಂಡ ಸಂಹಿತೆಯ ಅನ್ವಯ ಈ ಹೇಳಿಕೆ ಅಪರಾಧವಾಗಿರುವುದರಿಂದ ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಿಗೂ ಅವರು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...