Wednesday, February 4, 2026
Wednesday, February 4, 2026

Prakash Rai ಕಳೆದ ಎರಡು ಬಾರಿ ಮೋದಿಯವರ ಆಡಳಿತ ನೋಡಿರುವ ಜನಕ್ಕೆ ಭ್ರಮನಿರಸನವಾಗಿದೆ – ನಟ ಪ್ರಕಾಶ್ ರೈ

Date:

Prakash Rai ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರೈ ಮತ್ತೆ ವಾಗ್ದಾಳಿ ನಡೆಸಿದ್ದು, ಪ್ರಗತಿ, ಅಭಿವೃದ್ಧಿ ವಿಚಾರವಾಗಿ ಸೊಲ್ಲೆತ್ತದ ಮೋದಿ, ಹಿಂದೂ-ಮುಸ್ಲಿಂ ಗಲಾಟೆ ವಿಚಾರವಾಗಿ ಮಾತ್ರ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಟ ಪ್ರಕಾಶ್ ರೈ, ‘ಕಳೆದ 2 ಬಾರಿಯ ಮೋದಿ ಆಡಳಿತವನ್ನು ನೋಡಿರುವ ಜನ ಭ್ರಮನಿರಸನವಾಗಿದ್ದು, ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆ. ಆದರೆ ಮೋದಿ ಮಾತ್ರ ತಮ್ಮ ಬೇಳೆಕಾಳು ಬೇಯುತ್ತಿಲ್ಲ ಎಂದು ಹಿಂದೂ-ಮುಸ್ಲಿಂ ವಿಚಾರವಾಗಿ ಮಾತನಾಡುತ್ತಾ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದರು.

Prakash Rai ಅಂತೆಯೇ ‘ಕಾಂಗ್ರೆಸ್ ಪಕ್ಷ ಮುಸ್ಲಿಮರ ಪರವಾಗಿದ್ದು, ಎನ್ ಡಿಎ ಮೈತ್ರಿಕೂಟ ಮಾತ್ರ ಹಿಂದೂಗಳ ಪರವಾಗಿ ನಿಂತಿದೆ ಎಂದು ಹೇಳುತ್ತಿದ್ದಾರೆ. ಆ ಮೂಲಕ ಹಿಂದೂಗಳನ್ನು ಓಲೈಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರ ಈ ಹೇಳಿಕೆ ಬಗ್ಗೆ ಚುನಾವಣಾ ಆಯೋಗ ಮೌನವಹಿಸಿದ್ದು ನಿಜಕ್ಕೂ ನಮಗೆ ಅಚ್ಚರಿ ಮೂಡಿಸಿದೆ. ಪ್ರಧಾನಿ ಮೋದಿ ‘400 ಪಾರ್’ ಘೋಷಣೆ ಮೂಲಕ ತಮ್ಮನ್ನು ಪ್ರಶ್ನಿಸುವ ವಿರೋಧ ಪಕ್ಷಗಳೇ ಇರಬಾರದು ಎಂದು ಬಯಸುತ್ತಿದ್ದಾರೆ ಎಂದರು.

ಇದೇ ವೇಳೆ ಕೇಂದ್ರ ಸಚಿವ ಹಾಗೂ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಉದ್ಯಮಿ ರಾಜೀವ್ ಚಂದ್ರಶೇಖರ್ ವಿರುದ್ಧವೂ ಕಿಡಿಕಾರಿದ ಪ್ರಕಾಶ್ ರೈ, ‘ಕರ್ನಾಟಕದಲ್ಲಿ ಏನೂ ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ರಾಜ್ಯಸಭೆ ಸದಸ್ಯರೊಬ್ಬರು ಈಗ ಕೇರಳದಲ್ಲಿ ಸ್ಪರ್ಧಿಸುತ್ತಿದ್ದಾರೆ ಏಕೆ..? ಕರ್ನಾಟಕದಲ್ಲಿ ಅವರ ಪಾತ್ರವೇನು.. ರಾಜೀವ್ ಚಂದ್ರಶೇಖರ್ ಉದ್ಯಮಿಯಾಗಿದ್ದೂ ತೆರಿಗೆ ವಿಚಾರದಲ್ಲಿ ಕಳ್ಳಾಟ ಆಡುತ್ತಿದ್ದರೂ ಆದಾಯ ತೆರಿಗೆ ಇಲಾಖೆ ಏಕೆ ಸುಮ್ಮನಿದೆ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...