Monday, August 3, 2026
Monday, August 3, 2026

K.S.Eshwarappa ಈಶ್ವರಪ್ಪ ಅವರನ್ನ ಪಕ್ಷದಿಂದ 6 ವರ್ಷ ಅವಧಿಗೆ ಉಚ್ಚಾಟಿಸಿದ ಬಿಜೆಪಿ

Date:

K.S.Eshwarappa ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತ್ತೊಂದು ದೊಡ್ಡಸುದ್ದಿ ಬಂದಿದೆ. ಇಲ್ಲಿವರೆಗೂ ನಾಮಪತ್ರ ವಾಪಸ್ ಪಡೆಯುತ್ತಾರೆ ಎಂದು ಕೆಎಸ್​ ಈಶ್ವರಪ್ಪನವರ ನಿಲುವನ್ನು ಕಾದು ನೋಡುತ್ತಿದ್ದ ಬಿಜೆಪಿ ಇದೀಗ ಅವರನ್ನು ಉಚ್ಚಾಟನೆ ಮಾಡಿದೆ.
ಇವತ್ತು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿತ್ತು. ಗಡುವು ಮುಗಿದ ಬೆನ್ನಲ್ಲೆ ಚುನಾವಣಾಧಿಕಾರಿ ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿದ್ದರು. ಅದರ ಬೆನ್ನಲ್ಲೆ ರಾಜ್ಯ ಬಿಜೆಪಿ ಅಧಿಕೃತ ಲೆಟರ್ ಹೆಡ್​ನಲ್ಲಿ ಕೆಎಸ್​ ಈಶ್ವರಪ್ಪನವರನ್ನು ಉಚ್ಚಾಟಿಸಿದೆ.

ಉಚ್ಚಾಟನೆ ಆದೇಶದಲ್ಲಿ ಏನಿದೆ?

K.S.Eshwarappa ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...