Monday, September 21, 2026
Monday, September 21, 2026

Lok Sabha Election ಮೋದಿ ನೇತೃತ್ವದ ಸರ್ಕಾರ ಕಾರ್ಮಿಕರ ಪರ ಯಾವ ಯೋಜನೆಯನ್ನೂ ಜಾರಿಗೆ ತಂದಿಲ್ಲ- ಕೆ.ಸಿದ್ದಪ್ಪ

Date:

Lok Sabha Election ಕಳೆದ 70 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಸರ್ಕಾರ ಬಡವರ, ಕಾರ್ಮಿಕರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ 10 ವರ್ಷದಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕರ ಪರವಾಗಿ ಯಾವ ಯೋಜನೆಯನ್ನೂ ಜಾರಿಗೆ ತಂದಿಲ್ಲ. ಹಾಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಬೇಕು ಎಂದು ಅಸಂಘಟಿತ ಕಾರ್ಮಿಕರ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಸಿದ್ದಪ್ಪ ಕಾರ್ಮಿಕ ಸಮುದಾಯದವರಲ್ಲಿ ಮನವಿ ಮಾಡಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ೨ ಕೋಟಿ ಉದ್ಯೋಗ ಸೃಷ್ಟಿ ಮಾಡಿಲ್ಲ. ಮೋದಿಯವರನ್ನು ಕೇಳಿದರೆ ಪಕೋಡ ಮಾರಿ ಎಂದು ಹೇಳುತ್ತಾರೆ ಎಂದರು.

Lok Sabha Election ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಮಸ್ಯೆ ಕುರಿತು ಲೋಕಸಭೆಯಲ್ಲಿ ಒಂದೂ ಮಾತನಾಡಿಲ್ಲ. ಕಾರ್ಮಿಕರಿಗೆ, ಕೃಷಿ ಕೂಲಿಕಾರ್ಮಿಕರಿಗೆ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ. ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಪುನರಾರಂಭಿಸಿದರೆ ಸುಮಾರು 10 ಸಾವಿರ ಯುವಕರಿಗೆ ಉದ್ಯೋಗ ಸಿಗುತ್ತದೆ. ಸಂಸದರು ಕಾರ್ಖಾನೆ ಪುನರಾರಂಭಿಸುವ ಭರವಸೆ ನೀಡುತ್ತಿದ್ದಾರೆಯೇ ಹೊರತೂ ಕೇಂದ್ರದಿಂದ ಅನುದಾನ ತಂದು ಕಾರ್ಮಿಕರಿಗೆ ಬದುಕಿಗೆ ನೆರವಾಗುವ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...