Sunday, December 14, 2025
Sunday, December 14, 2025

Department of Under graduate Education ಏಪ್ರಿಲ್ 29 ರಿಂದ ದ್ವಿತೀಯ ಪಿಯು ಪರೀಕ್ಷೆ ಶುರು ಪೂರ್ವ ಸಿದ್ಧತೆಗೆ ಸಜ್ಜು-ಬಿ.ಕೃಷ್ಷಪ್ಪ

Date:

Department of Under graduate Education ಶಿವಮೊಗ್ಗ ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಶಿವಮೊಗ್ಗದ 02 ಮತ್ತು ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲ್ಲೂಕುಗಳಲ್ಲಿನ 01 ಪರೀಕ್ಷಾ ಕೇಂದ್ರ ಸೇರಿ ಒಟ್ಟು 08 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 3531 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ದಿನಾಂಕ 16.05.2024 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 02.15 ರಿಂದ ಸಂಜೆ 04.30 ರವರೆಗೆ ನಡೆಯಲಿದೆ.

ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ.

Department of Under graduate Education ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು , ಅವರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡುವಂತೆ ತಿಳಿಸಿದರು.

ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ ಅವರು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪ್ರಭಾರ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...