Thursday, March 19, 2026
Thursday, March 19, 2026

B.Y.Raghavendra ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ- ಬಿ.ವೈ.ರಾಘವೇಂದ್ರ

Date:

B.Y.Raghavendra ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆಯಿದ್ದು, ಇದರ ಪರಿಣಾಮವಾಗಿ ಬಿಜೆಪಿ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಬಿಜೆಪಿ ನಗರ ಮಂಡಲ ವತಿಯಿಂದ ನಗರದ ಸೋಮಿನಕೊಪ್ಪ ರಸ್ತೆಯಲ್ಲಿರುವ ಶಾರದಮ್ಮ ಬಡಾವಣೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರೆಂಟಿಗಳು ರಾಜ್ಯದ ಎಲ್ಲಾ ಜನರಿಗೆ ತಲುಪುವಲ್ಲಿ ವಿಫಲವಾಗಿದೆ. ಇದು ಮೂಗಿಗೆ ತುಪ್ಪ ಸವರುವಂತಹ ಕೆಲಸವಾಗಿದೆ. ರಾಜ್ಯದ ಪ್ರಜ್ಞಾವಂತ ಮತದಾರರು ಇದನ್ನು ಗಮನಿಸುತ್ತಿದ್ದಾರೆ. ಬಿಜೆಪಿಗೆ ಹೆಚ್ಚಿನ ಬೆಂಬಲವನ್ನು ನೀಡಲಿದ್ದಾರೆ ಎಂದು ಹೇಳಿದರು.
ಈ ಚುನಾವಣೆ ರಾಷ್ಟ್ರೀಯ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ನಡೆಯುತ್ತಿರುವ ಚುನಾವಣೆಯಾಗಿದೆ. ಯಾವುದೇ ಕುಟುಂಬದ ವಿಷಯ, ವ್ಯಕ್ತಿಗಳ ವಿಷಯ, ಹಾಗೂ ಟೀಕೆ ಟಿಪ್ಪಣಿಗಳಿಗೆ ಮತದಾರರು ತಲೆ ಕೆಡಿಸಿಕೊಳ್ಳುವುದಿಲ್ಲ, ರಾಷ್ಟ್ರದ ರಕ್ಷಣೆ ಹಾಗೂ ಪ್ರತಿಯೊಬ್ಬ ಪ್ರಜೆಯ ರಕ್ಷಣೆಯನ್ನು ಮಾಡುವಂತಹ ಸರ್ಕಾರವನ್ನು ಆಯ್ಕೆ ಮಾಡಬೇಕೆಂಬುದು ಪ್ರತಿಯೊಬ್ಬ ಭಾರತೀಯನ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಇದಕ್ಕೆ ಯಾವುದೇ ಸಂಶಯವಿಲ್ಲ ಎಂದರು.
B.Y.Raghavendra ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಕಾರ್ಪೋರೇಟರ್‌ಗಳಾದ ಆಶಾ ಚಂದ್ರ ಪ್ಪ, ಬೊಮ್ಮನಕಟ್ಟೆ ಮಾಲತೇಶ್, ಇನ್ನಿತರರ ಸಹಕಾರದಿಂದಾಗಿ ಬೊಮ್ಮನಕಟ್ಟೆ ಭಾಗದಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸುವಂತಹ ಕೆಲಸ ಯಶಸ್ವಿಯಾಗಿದೆ ಎಂದರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಮೋಹನ್‌ರೆಡ್ಡಿ, ನಾಗರಾಜ್, ಸೋಮಶೇಖರ್ ಮತ್ತಿರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...