Thursday, June 18, 2026
Thursday, June 18, 2026

Shivamogga DVS College ಪಿಯು ಮರು ಮೌಲ್ಯಮಾಪನದಿಂದ ಕಲಾ ವಿಭಾಗದ ಆರನೇ ಶ್ರೇಣಿಯಿಂದ ನಾಲ್ಕನೇ ಶ್ರೇಣಿ ಪಡೆದ ಸಿಂಚನಾ

Date:

Shivamogga DVS College ದ್ವಿತೀಯ ಪಿಯುಸಿ ಪರೀಕ್ಷೆ ಕಲಾ ವಿಭಾಗದಲ್ಲಿ ಶಿವಮೊಗ್ಗ ಡಿವಿಎಸ್ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನ ಹೆಚ್ ಎಂ 600ಕ್ಕೆ 593 ಅಂಕಗಳಿಸಿ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್‌ ಪಡೆದಿದ್ದಾರೆ.

ಸಿಂಚನ ಎಚ್ ಎಂ ಶಿವಮೊಗ್ಗದ ಶಿಕ್ಷಕಿ ವಾಣಿ ಆರ್ ಜೆ, ದಿ ಹಾಲೇಶ್ ಎನ್ ದಂಪತಿ ಪುತ್ರಿ, ಎಸೆಸೆಲ್ಸಿ ಯಲ್ಲಿ ಶೇ. 92.3 ಅಂಕ ಪಡೆದು ಕಲಾ ವಿಭಾಗವನ್ನು ಆಯ್ದುಕೊಂಡಿದ್ದ ಸಿಂಚನ ಮುಂದೆ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Shivamogga DVS College ಮರು ಮೌಲ್ಯಮಾಪನದಲ್ಲಿ 2ಅಂಕ ಹೆಚ್ಚುವರಿ ಬಂದಿದ್ದು
ಮೊದಲಿಗೆ 600 ಕ್ಕೆ 591 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ 6 ನೇ ರ‍್ಯಾಂಕ್‌ ಪಡೆದಿದ್ದ ಸಿಂಚನ, ಇತಿಹಾಸ ಪತ್ರಿಕೆಯನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ವೇಳೆ 2 ಅಂಕ ಹೆಚ್ಚು ಬಂದಿದೆ ಒಟ್ಟು 593 ಅಂಕದೊಂದಿಗೆ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್‌ ಆಗಿ ಹೊರಹೊಮ್ಮಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...