Sunday, September 27, 2026
Sunday, September 27, 2026

Lok Sabha Election ಮತದಾನ ಬಹಿಷ್ಕರಿಸಿ ನಿರ್ಧಾರ ತಿಳಿಸಿದ ‌ಹೊಸನಗರ ತಾಲ್ಲೂಕಿನ ಕುಂಭತ್ತಿ ಗ್ರಾಮಸ್ಥರು

Date:

Lok Sabha Election ಹೊಸನಗರ ತಾಲ್ಲೂಕಿನ ನಗರ ಹೋಬಳಿ ಕುಂಭತ್ತಿ ಗ್ರಾಮದ ಸ.ನಂ.5ರಲ್ಲಿ ಇಬ್ಬರು ಜಂಟಿಯಾಗಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರಿಗೆ ಪ್ರತೀದಿನವೂ ಒಂದಲ್ಲ ಒಂದು ಸಮಸ್ಯೆಯಾಗುತ್ತಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವಂತಹ ಸ್ಥಿತಿ ಬಂದಿದೆ.

ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳಿಗೆ ದೂರು ಕೊಟ್ಟರೂ ಈವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನದಿಂದ ದೂರವೇ ಉಳಿದು ಚುನಾವಣೆ ಬಹಿಷ್ಕರಿಸುವುದಾಗಿ ನಿರ್ಧರಿಸಿರುವ ಕುಂಭತ್ತಿ ಗ್ರಾಮಸ್ಥರು ತಹಶೀಲ್ದಾರ್ ಮೂಲಕ ಇಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.

Lok Sabha Election ಕಾರಣಗಿರಿಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಗಣಿಗಾರಿಕೆಯನ್ನು ವಿರೋಧಿಸಿ ಸಾಮೂಹಿಕ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಗಣಿಗಾರಿಕೆ ವಿರೋಧಿ ಭಿತ್ತಿಪತ್ರಗಳನ್ನು ಹಿಡಿದು ಗಣಿಗಾರಿಕೆಯ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೇ, ತಮಗೆ ನ್ಯಾಯ ದೊರೆಯುವವರೆಗೂ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...